ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ 10 ಮತ್ತು 12 ನೇ ತರಗತಿಗಳನ್ನು ಆರಂಭ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಅದಕ್ಕೆ ಪೂರಕವಾದ ಎಲ್ಲಾ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳನ್ನು ಶಾಲೆಗೆ ಕಳುಹಿಸುವ ವಿಚಾರದಲ್ಲಿ ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಕೊರೋನಾ ಬಗ್ಗೆ ಆತಂಕ ಇರುವವರು ಮಕ್ಕಳನ್ನು ಹೇಗಪ್ಪಾ ಶಾಲೆಗೆ ಕಳುಹಿಸುವುದು ಎಂಬ ಭಯವಿರುವವರು ಮಕ್ಕಳನ್ನು ಶಾಲೆಗೆ ಕಳುಹಿಸದಿದ್ದರೂ, ಆ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಆನ್ಲೈನ್ ಪಾಠಕ್ಕೂ ಅವಕಾಶವನ್ನು ನೀಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಶಾಲೆಗಳಲ್ಲಿ ಮಕ್ಕಳ ಸುರಕ್ಷತೆಗೆ ಅಗತ್ಯವೆನಿಸಿದ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮಕ್ಕಳ ಮತ್ತು ಶಿಕ್ಷಕರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡೇ ರಾಜ್ಯದಲ್ಲಿ ಪೂರಕ ವ್ಯವಸ್ಥೆಗಳನ್ನು ಅನುಸರಿಸಿಕೊಂಡು ಶಾಲಾರಂಭ ಮಾಡಿರುವುದಾಗಿ ಸುರೇಶ್ ಕುಮಾರ್ ಹೇಳಿದ್ದಾರೆ
ಮಕ್ಕಳಲ್ಲಿ ಜ್ವರ, ನೆಗಡಿಯಂತಹ ಲಕ್ಷಣಗಳು ಕಂಡುಬಂದಲ್ಲಿ ಅಂತಹ ವಿದ್ಯಾರ್ಥಿಗಳು ಶಾಲೆಗೆ ಆಗಮಿಸಬೇಡಿ. ಸಂಪೂರ್ಣ ಗುಣಮುಖರಾದ ಬಳಿಕ ಶಾಲೆಗೆ ಆಗಮಿಸಿದರೆ ಸಾಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ್ದಾರೆ. ಕೊರೋನಾ ಮುಂಜಾಗ್ರತಾ ಕ್ರಮವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಸ್ವಚ್ಛತೆಗೆ ಆದ್ಯತೆ ನೀಡುವುದು ಮೊದಲಾದ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಕೊರೋನಾ ಹರಡಂತೆ ಸ್ವ ಎಚ್ಚರ ವಹಿಸುವಂತೆಯೂ ಸಚಿವರು ಇದೇ ಸಂದರ್ಭದಲ್ಲಿ ಮನವಿ ಮಾಡಿದ್ದಾರೆ
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.