ಬೆಂಗಳೂರು: ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಉತ್ತಮ ಸಾಧನೆ ಮಾಡಿದ 121 ಪೊಲೀಸ್ ಸಿಬ್ಬಂದಿಗಳನ್ನು ಮುಖ್ಯಮಂತ್ರಿ ಪದಕ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ.
2019 ನೇ ವರ್ಷಕ್ಕೆ ಸಂಬಂಧಿಸಿದಂತೆ 121 ಮಂದಿ ಪೊಲೀಸರನ್ನು ಈ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ. ಅವರು ನೀಡಿದ ಮಾದರಿ ಸೇವೆಯನ್ನು ಗುರುತಿಸಿ ಅವರಿಗೆ ಮುಖ್ಯಮಂತ್ರಿ ಪದಕ ಪುರಸ್ಕಾರ ನೀಡಲು ಮುಂದಾಗಿರುವುದಾಗಿಯೂ ಸರ್ಕಾರದ ಅಧಿಕೃತ ಮೂಲಗಳು ಮಾಹಿತಿ ನೀಡಿವೆ.
ರಾಜ್ಯದ ಐಪಿಎಸ್ ಅಧಿಕಾರಿಗಳಾದ ರಾಘವೇಂದ್ರ ಸುಹಾಸ್, ಲಕ್ಷ್ಮಣ ನಿಂಬರಗಿ, ಲೋಕೇಶ್ ಜಗಲಾಸರ್, ಮಿಥುನ್ ಕುಮಾರ್ ಅವರನ್ನೊಳಗೊಂಡಂತೆ ಸರ್ಕಾರ ಈ ಮಹತ್ವದ ಪುರಸ್ಕಾರಕ್ಕೆ 121 ಮಂದಿ ಭಾಜನರಾಗಿದ್ದಾರೆ. ಈ ಪುರಸ್ಕಾರವನ್ನು ಪ್ರದಾನ ಮಾಡುವ ದಿನಾಂಕವನ್ನು ಶೀಘ್ರದಲ್ಲೇ ಘೋಷಣೆ ಮಾಡಲಾಗುವುದು ಎಂದು ಸರ್ಕಾರದ ಅಧಿಕೃತ ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.