ಬೆಂಗಳೂರು: ನಾಳೆಯಿಂದ ತೊಡಗಿದಂತೆ ಎರಡು ದಿನಗಳ ಕಾಲ ಶಿವಮೊಗ್ಗದಲ್ಲಿ ನಡೆಯಲಿರುವ ರಾಜ್ಯ ಬಿಜೆಪಿಯ ಪ್ರಮುಖ ನಾಯಕರ ಸಭೆ ಮತ್ತು ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಇಂದು ಸಂಜೆ ನಗರಕ್ಕೆ ಆಗಮಿಸಲಿದ್ದಾರೆ.
ಈ ಸಂದರ್ಭದಲ್ಲಿ ಕಳೆದೊಂದು ವರ್ಷದಲ್ಲಿ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳ ಬಗ್ಗೆ, ಗ್ರಾಮ ಪಂಚಾಯತ್ ಚುನಾವಣೆ, ಫಲಿತಾಂಶದ ಬಗ್ಗೆ, ಮುಂದೆ ರಾಜ್ಯ ಸರ್ಕಾರ ರಾಜ್ಯದ ಜನರ ಅಭಿವೃದ್ಧಿಯ ಹಿನ್ನೆಲೆಯಲ್ಲಿ ಕೈಗೊಳ್ಳಲಿರುವ ಕಾರ್ಯದ ಕುರಿತಂತೆಯೂ ಅರುಣ್ ಸಿಂಗ್ ಅವರಿಗೆ ಬಿಜೆಪಿ ನಾಯಕರು ಮಾಹಿತಿ ನೀಡಲಿದ್ದಾರೆ.
ಜೊತೆಗೆ ಇತ್ತೀಚೆಗೆ ವಿಧಾನ ಸಭೆಯಲ್ಲಿ ಅಂಗೀಕಾರವಾದ ಮಸೂದೆಗಳ ಬಗ್ಗೆ, ಗೋಹತ್ಯೆ ನಿಷೇಧ ಕಾಯ್ದೆ ಅಂಗೀಕಾರಕ್ಕೆ ಸುಗ್ರೀವಾಜ್ಞೆ ಹೊರಡಿಸುವ ಕುರಿತು, ರಾಜ್ಯದಲ್ಲಿ ಲವ್ ಜಿಹಾದ್ ತಡೆಗೆ ಕಾಯ್ದೆ ತರುವ ಸಂಬಂಧವೂ ಅರುಣ್ ಅವರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.