ಬೈಂದೂರು : ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಈಗ ನಡೆಯುತ್ತಿರುವ ಚತುಷ್ಪಥ ಹೆದ್ದಾರಿ ಕಾಮಗಾರಿಯಿಂದ ವಿವಿಧೆಡೆ ಹಲವು ಸಮಸ್ಯೆಗಳು ಸೃಷ್ಟಿಯಾಗುತ್ತಿವೆ ಎಂಬ ದೂರುಗಳಿವೆ. ಅಧಿಕಾರಿಗಳು ಎಲ್ಲ ಗ್ರಾಮಗಳಿಗೂ ಭೇಟಿ ನೀಡಿ ಇವುಗಳಿಗೆ ಪರಿಹಾರ ರೂಪಿಸಬೇಕು ಎಂದು ಶಾಸಕ ಕೆ. ಗೋಪಾಲ ಪೂಜಾರಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹೆದ್ದಾರಿ ಪ್ರಾಧಿಕಾರದ ಯೋಜನಾ ಪ್ರಬಂಧಕ ಕೆ. ಎಂ. ಹೆಗ್ಡೆ, ಗುತ್ತಿಗೆದಾರ ಕಂಪನಿಯ ಯೋಗೇಂದ್ರಪ್ಪ ಮತ್ತು ಸುರೇಶ ಪಾಟೀಲ್ ಜತೆ ಅವರು ಶುಕ್ರವಾರ ಗ್ರಾಮಗಳಿಗೆ ಭೇಟಿನೀಡಿ ಪರಿಶೀಲಿಸಿದರು. ಜನಪ್ರತಿನಿಧಿಗಳು ಮತ್ತು ಜನರೊಂದಿಗೆ ಚರ್ಚಿಸಿದ ಬಳಿಕ ಕೆಲವು ಸೂಚನೆಗಳನ್ನಿತ್ತರು. ಮರವಂತೆಯಲ್ಲಿ ಮೀನುಗಾರಿಕಾ ಬಂದರು ಪ್ರದೇಶದಿಂದ ವಾಹನಗಳು ಹೆದ್ದಾರಿ ಪ್ರವೇಶಿಸಲು ಅವಕಾಶ ಇರಬೇಕು. ನಾವುಂದದಲ್ಲಿ ಬಡಾಕೆರೆ ಜಂಕ್ಷನ್ ಬಳಿ ಅಂಡರ್ ಪಾಸ್ ಮತ್ತು ಸರ್ವೀಸ್ ರೋಡ್ ನಿರ್ಮಿಸಬೇಕು, ತ್ರಾಸಿ, ಅರೆಹೊಳೆ ಕ್ರಾಸ್, ಯಡ್ತರೆ ಕ್ರಾಸ್ನಲ್ಲಿ ಜಂಕ್ಷನ್ ರಚಿಸಬೇಕು. ಬೈಂದೂರಿನಲ್ಲಿ ಫ್ಲೈಓವರ್ ನಿರ್ಮಿಸಬೇಕು ಎಂದು ಸಾರ್ವಜನಿಕರು ನೀಡಿದ ಸಲಹೆಗಳನ್ನು ಕಾರ್ಯತಗೊಳಿಸಬೇಕೆಂದು ಸೂಚಿಸಿದರು.
ಮರವಂತೆ ಗ್ರಾಪಂ ಮಾಜಿ ಅಧ್ಯಕ್ಷ ಎಸ್. ಜನಾರ್ದನ, ನಾವುಂದ ಗ್ರಾಪಂ ಅಧ್ಯಕ್ಷೆ ಪದ್ಮಾವತಿ, ಉಪಾಧ್ಯಕ್ಷ ಕರುಣಾಕರ ಶಟ್ಟಿ, ಸದಸ್ಯ ನರಸಿಂಹ ದೇವಾಡಿಗ, ಯಡ್ತರೆ ಗ್ರಾಪಂ ಅಧ್ಯಕ್ಷ ನಾಗರಾಜ ಶೆಟ್ಟಿ, ಉಪಾಧ್ಯಕ್ಷೆ ಕಲಾವತಿ ನಾಗರಾಜ್, ಮಾಜಿ ತಾಪಂ ಸದಸ್ಯ ಸದಾಶಿವ ಡಿ. ಪಡುವರಿ, ರೈಲ್ವೆ ಯಾತ್ರಿಸಂಘದ ಅಧ್ಯಕ್ಷ ಕೆ. ವೆಂಕಟೇಶ ಕಿಣಿ ತಮ್ಮೂರಿನ ಸಮಸ್ಯೆಗಳನ್ನು ಮುಂದಿಟ್ಟರು. ತಾಪಂ ಸದಸ್ಯ ಎಸ್. ರಾಜು ಪೂಜಾರಿ ಚರ್ಚೆಯಲ್ಲಿ ಪಾಲ್ಗೊಂಡು ಸಲಹೆ ನೀಡಿದರು.
ಕಾಮಗಾರಿ ಸಂದರ್ಭದಲ್ಲಿ ವಿಸ್ತರಣೆ ವೇಳೆ ಹಾಳಾದ ಗ್ರಾಪಂ ನೀರು ಪೂರೈಕೆ ವ್ಯವಸ್ಥೆಯನ್ನು ಸುಗಮಗೊಳಿಸುವ, ಚರಂಡಿ ನಿರ್ಮಾಣವಾಗುವವರೆಗೆ ಸೃಷ್ಟಿಯಾಗುವ ಸಮಸ್ಯೆಗಳನ್ನ ಯಂತ್ರಗಳ ಮೂಲಕ ನಿವಾರಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.