ಬೆಂಗಳೂರು: ರೈತರ ಆದಾಯ ದ್ವಿಗುಣಗೊಳಿಸುವ ಪಿಎಂ ಮೋದಿ ಅವರ ಹಲವು ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ಬಾಗಲಕೋಟೆಯ ತೋಟಗಾರಿಕಾ ವಿವಿಯ ತೋಟಗಾರಿಕಾ ಮೇಳವನ್ನು ಆನ್ಲೈನ್ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ತೋಟಗಾರಿಕಾ ಉತ್ಪನ್ನಗಳ ಮೌಲ್ಯವರ್ಧನೆ, ಸಂಸ್ಕರಣೆ, ದಾಸ್ತಾನು, ಪ್ಯಾಕೇಜಿಂಗ್ ಗಳ ಬಗ್ಗೆ ನೂತನ ತಂತ್ರಜ್ಞಾನಗಳನ್ನು ಪರಿಚಯಿಸಲು ಉದ್ದೇಶಿಸಲಾಗಿದೆ. ತೋಟಗಾರಿಕಾ ಉದ್ದಿಮೆಯನ್ನು ಅಭಿವೃದ್ಧಿ ಮಾಡುವ ಹಿನ್ನೆಲೆಯಲ್ಲಿ ಅಗತ್ಯವಾದ ಎಲ್ಲಾ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ರೈತರ ಅನುಕೂಲಕ್ಕಾಗಿಯೇ ಪ್ರಧಾನಿ ನರೇಂದ್ರ ಮೋದಿ ಅವರು 100 ನೇ ಕಿಸಾನ್ ರೈಲಿಗೆ ಚಾಲನೆಯನ್ನು ನೀಡಿದ್ದಾರೆ. ರೈತರ ಉತ್ಪನ್ನಗಳನ್ನು ದೇಶದ ಬೇರೆ ಬೇರೆ ಭಾಗಗಳಿಗೆ ತಲುಪಿಸಲು ಬೇಕಾದ ಪೂರಕ ಕ್ರಮಗಳನ್ನು ಸಹ ಕೇಂದ್ರ, ರಾಜ್ಯ ಸರ್ಕಾರಗಳು ಕೈಗೊಂಡಿವೆ. ತೋಟಗಾರಿಕೆ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ರಾಜ್ಯವು ಅದರಲ್ಲಿ ಹೆಚ್ಚಿನ ಸಂಶೋಧನೆ ನಡೆಸಲು, ಮೂಲಸೌಕರ್ಯಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.