ನವದೆಹಲಿ: ಇಂದೋರ್ನಲ್ಲಿ ಹಿಂದೂ ದೇವರು ಮತ್ತು ದೇವತೆಗಳನ್ನು ಅವಮಾನಿಸಿದ ಆರೋಪದ ಮೇಲೆ ಮಧ್ಯಪ್ರದೇಶ ಪೊಲೀಸರು ಶುಕ್ರವಾರ ಐವರು ಸ್ಟ್ಯಾಂಡಪ್ ಕಾಮಿಡಿಯನ್ಗಳನ್ನು ಬಂಧಿಸಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ.
ಬಂಧಿತ ಹಾಸ್ಯಗಾರರಲ್ಲಿ ಮುನಾವರ್ ಫಾರೂಕಿ, ಎಡ್ವಿನ್ ಆಂಥೋನಿ, ಪ್ರಖರ್ ವ್ಯಾಸ್, ಪ್ರಿಯಮ್ ವ್ಯಾಸ್ ಮತ್ತು ನಳಿನ್ ಯಾದವ್ ಸೇರಿದ್ದಾರೆ.
ಇವರುಗಳು ಹಿಂದೂ ದೇವರುಗಳು, ದೇವತೆಗಳು ಮತ್ತು ಪದ್ಧತಿಗಳ ವಿರುದ್ಧ “ಅಸಭ್ಯ ಮತ್ತು ನಾಚಿಕೆಗೇಡಿನ” ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಹಿಂದೂ ಗುಂಪು ಇವರ ವಿರುದ್ಧ ಎಫ್ಐಆರ್ ದಾಖಲಿಸಿದ ನಂತರ ಇವರನ್ನು ಬಂಧಿಸಲಾಗಿದೆ.
ಇವರುಗಳು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧವೂ ಹೇಳಿಕೆ ನೀಡಿದ್ದಾರೆ.
ಹೊಸ ವರ್ಷದ ಸಂದರ್ಭದಲ್ಲಿ ಕೆಫೆಯೊಂದರಲ್ಲಿ ಇವರುಗಳು ಕಾಮಿಡಿ ಶೋ ನೀಡಿ ಹಿಂದೂ ಅವಹೇಳನೆ ಮಾಡಿದ್ದಾರೆ ಎನ್ನಲಾಗಿದೆ.
ಭಾರತ ದಂಡ ಸಂಹಿತೆಯ ಸೆಕ್ಷನ್ 295-ಎ (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು), 298 (ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವ ಉದ್ದೇಶ), 269 (ಜೀವಕ್ಕೆ ಅಪಾಯಕಾರಿ ರೋಗದ ಸೋಂಕನ್ನು ಹರಡುವ ಸಾಧ್ಯತೆ ಇರುವ ನಿರ್ಲಕ್ಷ್ಯದ ಕೃತ್ಯ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.