ಬೆಂಗಳೂರು: ಸಮರ್ಥ ಭಾರತ ಮತ್ತು ಮಿಥಿಕ್ ಸೊಸೈಟಿ ಬೆಂಗಳೂರು ವತಿಯಿಂದ DO GOOD, BE GOOD CAMPAGN 2021 ಅಭಿಯಾನದ ಅಂಗವಾಗಿ ಕಾಲೇಜು ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.
ಸ್ವಾಮಿ ವಿವೇಕಾನಂದರ ದೃಷ್ಟಿಯಲ್ಲಿ ಆತ್ಮನಿರ್ಭರ ಭಾರತ ಎಂಬ ವಿಷಯದ ಕುರಿತು ಈ ಪ್ರಬಂಧ ಸ್ಪರ್ಧೆ ನಡೆಯಲಿದೆ. ಪದವಿ, ತತ್ಸಮಾನ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ ಎಂದು ಆಯೋಜಕರು ಮಾಹಿತಿ ನೀಡಿದ್ದಾರೆ.
ಈ ಪ್ರಬಂಧ ಸ್ಪರ್ಧೆ ಕನ್ನಡ ಮತ್ತು ಇಂಗ್ಲಿಷ್ ಭಾಷೆಯಲ್ಲಿ ನಡೆಯಲಿದ್ದು, ಪ್ರಥಮ ಬಹುಮಾನವಾಗಿ 10 ಸಾವಿರ ಮತ್ತು ಪ್ರಮಾಣ ಪತ್ರ, ಎರಡನೇ ಬಹುಮಾನವಾಗಿ 7,500 ರೂ. ಮತ್ತು ಪ್ರಮಾಣ ಪತ್ರ, ಮೂರನೇ ಬಹುಮಾನವಾಗಿ 5000 ರೂ. ಮತ್ತು ಪ್ರಮಾಣ ಪತ್ರ, 1000 ರೂ. ಗಳಂತೆ 20 ಸಮಾಧಾನಕರ ಬಹುಮಾನಗಳನ್ನು ವಿಜೇತರಿಗೆ ನೀಡಲಾಗುವುದಾಗಿ ಆಯೋಜಕರು ತಿಳಿಸಿದ್ದಾರೆ.
ಮಾಹಿತಿಗಾಗಿ 9113263342, 9483150527 ಅನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.