ಬೀದರ್: ವಚನಕಾರ ಬಸವಣ್ಣ ಅವರ ಕರ್ಮಭೂಮಿ ಬಸವ ಕಲ್ಯಾಣದಲ್ಲಿ ಅನುಭವ ಮಂಟಪ ನಿರ್ಮಾಣ ಭೂಮಿಪೂಜೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿಎಂ ಯಡಿಯೂರಪ್ಪ ಅವರು ಜ. 6 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ಸಚಿವ ಪ್ರಭು ಚೌಹಾಣ್ ತಿಳಿಸಿದ್ದಾರೆ.
ಅನುಭವ ಮಂಟಪ ನಿರ್ಮಾಣ ಕಾರ್ಯಕ್ಕಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು 600 ಕೋಟಿ ರೂ. ಗಳನ್ನು ಬಿಡುಗಡೆ ಮಾಡಿದ್ದಾರೆ. ಪೂಜ್ಯರಾದ ಲಿಂ. ಡಾ. ಚೆನ್ನಬಸವಪಟ್ಟದ್ದೇವರ ಸಂಕಲ್ಪದಂತೆ ಈ ಅನುಭವ ಮಂಟಪ ನಿರ್ಮಾಣವಾಗಲಿದೆ ಎಂದು ಚೌಹಾಣ್ ಸುದ್ದಿಗಾರರಿಗೆ ತಿಳಿಸಿದರು.
ಈ ಬಾರಿಯ ಬಿಜೆಪಿ ಸರ್ಕಾರದ ಅವಧಿ ಮುಗಿಯುವ ಮುನ್ನ ಈ ಅನುಭವ ಮಂಟಪ ನಿರ್ಮಾಣ ಕಾರ್ಯ ಸಂಪೂರ್ಣವಾಗಲಿದೆ. ಈ ಕಟ್ಟಡ 180 ಅಡಿ ಎತ್ತರವಿರಲಿದೆ. ಈ ಅನುಭವ ಮಂಟಪ ಸಂಸತ್ಗೆ ಸಮಾನವಾದ ಪಾವಿತ್ರ್ಯತೆ ಹೊಂದಿರಲಿದೆ ಎಂದು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.