ಬೆಂಗಳೂರು: ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯದ 30 ಜಿಲ್ಲೆಗಳಿಗೆ ಸಂಬಂಧಿಸಿದಂತೆ ಜನಸೇವಕ ಸಮಾವೇಶವು ಜ. 11-13 ರ ವರೆಗೆ ನಡೆಯಲಿದೆ. ಇದರ ಸಮಾರೋಪವು ಜ. 16 ಅಥವಾ 17 ರಂದು ಬೆಂಗಳೂರಿನಲ್ಲಿ ನಡೆಯಲಿದ್ದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾಗವಹಿಸುವ ಸಾಧ್ಯತೆ ಇದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಮತ್ತು ರಾಜ್ಯ ವಕ್ತಾರ ಗಣೇಶ್ ಕಾರ್ಣಿಕ್ ಮಾಹಿತಿ ನೀಡಿದ್ದಾರೆ.
ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರಾದ ಎಸ್ ಟಿ ಸೋಮಶೇಖರ್, ಆರ್ ಅಶೋಕ್ , ಸಂಸದ ಪ್ರತಾಪ್ ಸಿಂಹ, ರಾಜ್ಯ ಉಪಾಧ್ಯಕ್ಷ ಎಂ ರಾಘವೇಂದ್ರ, ಎಸ್. ಟಿ. ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣ್ ಸ್ವಾಮಿ, ಸಂಚಾಲಕರಾಗಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ ಅಶ್ವತ್ಥ್ ನಾರಾಯಣ್ ಮೊದಲಾದವರನ್ನು ಒಳಗೊಂಡ ತಂಡವು ಜ. 11 ರಂದು ಮೈಸೂರು, ಚಾಮರಾಜನಗರ, 12 ರಂದು ಹಾಸನ , ಮಂಡ್ಯ, 13 ರಂದು ರಾಮನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಸಮಾವೇಶ ನಡೆಸಲಿದೆ. ಹಾಗೆಯೇ, ಸಚಿವ ಈಶ್ವರಪ್ಪ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ, ಸಚಿವ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಉಪಾಧ್ಯಕ್ಷ ಅರವಿಂದ್ ಲಿಂಬಾವಳಿ, ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕರಾಡಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್, ಮೊದಲಾದವರ ತಂಡ ಜ. 11 ರಂದು ಚಿಕ್ಕಮಗಳೂರು, ಉಡುಪಿ, 12 ರಂದು ಮಡಿಕೇರಿ, ಮಂಗಳೂರು, 13 ರಂದು ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪ್ರವಾಸ ನಡೆಸಲಿವೆ.
ಮೂರನೇ ತಂಡದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವ ವಿ ಸೋಮಣ್ಣ, ರಮೇಶ್ ಜಾರಕಿಹೊಳಿ, ರಾಜ್ಯ ಎಸ್. ಟಿ. ಮೋರ್ಚಾ ಅಧ್ಯಕ್ಷ ತಿಪ್ಪರಾಜು, ರಾಜ್ಯ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್, ಸಂಚಾಲಕರಾಗಿ ರಾಜ್ಯ ಕಾರ್ಯದರ್ಶಿ ತುಳಸಿ ಮುನಿರಾಜು ಗೌಡ ಅವರು ಜ. 11 ರಂದು ಬೆಳಗಾವಿ, ಚಿಕ್ಕೋಡಿ, 12 ರಂದು ಬಾಗಲಕೋಟೆ, ವಿಜಯಪುರ, 13 ರಂದು ಗದಗ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಪ್ರವಾಸ ನಡೆಸಲಿದೆ.
ನಾಲ್ಕನೇ ತಂಡವನ್ನು ಸಚಿವ ಜಗದೀಶ್ ಶೆಟ್ಟರ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಸಚಿವೆ ಶಶಿಕಲಾ ಜೊಲ್ಲೆ, ಪ್ರಭು ಚೌಹಾಣ್, ರಾಜ್ಯ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ್, ಯುವ ಮೋರ್ಚಾ ಅಧ್ಯಕ್ಷ ಡಾ. ಸಂದೀಪ್ ಮುನ್ನಡೆಸಲಿದ್ದು, ಸಂಚಾಲಕರಾಗಿ ಮಹೇಶ್ ಟೆಂಗಿನಕಾಯಿ ಭಾಗವಹಿಸಲಿದ್ದಾರೆ. ಈ ತಂಡ 11 ರಂದು ಬೀದರ್, ಕಲ್ಬುರ್ಗಿ, 12 ರಂದು ಯಾದಗಿರಿ, ರಾಯಚೂರು, 13 ರಂದು ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ನಡೆಸಲಿದೆ. ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ನೇತೃತ್ವದ, ಸಚಿವ ಲಕ್ಷ್ಮಣ್ ಸವದಿ, ಶ್ರೀರಾಮುಲು, ಗೃಹಸಚಿವ ಬಸವರಾಜ ಬೊಮ್ಮಾಯಿ, ರಾಜ್ಯ ಉಪಾಧ್ಯಕ್ಷೆ ಶೋಭಾ ಕರಂದ್ಲಾಜೆ, ಸಂಸದ ಶಿವಕುಮಾರ್ ಉದಾಸಿ, ಮಹಿಳಾ ಮೋರ್ಚಾದ ರಾಜ್ಯಾಧ್ಯಕ್ಷರಾದ ಗೀತಾ ವಿವೇಕಾನಂದ ಅವರ ತಂಡ ದ ಸಂಚಾಲಕರಾಗಿ ರಾಜ್ಯ ಕಾರ್ಯದರ್ಶಿ ನವೀನ್ ಇರಲಿದ್ದು, ಈ ತಂಡ 11 ರಂದು ಹಾವೇರಿ, ದಾವಣಗೆರೆ, 12 ರಂದು ಚಿತ್ರದುರ್ಗ, ತುಮಕೂರು, 13 ರಂದು ಕೋಲಾರ ಮತ್ತು ಚಿಕ್ಕಬಳ್ಳಾಪುರ ಗಳಲ್ಲಿ ಪ್ರವಾಸ ನಡೆಸಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.