ಬೆಂಗಳೂರು: ಪ್ರಧಾನಿ ಮೋದಿ ನೇತತ್ವದ ಕೇಂದ್ರ ಸರ್ಕಾರ ಜಾರಿ ಮಾಡಲಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಿಂದಾಗಿ ಪ್ರಾದೇಶಿಕ ಭಾಷೆಗಳಿಗೆ ವಿಶೇಷ ಮನ್ನಣೆ ದೊರೆಯಲಿದೆ. ಜೊತೆಗೆ ಪ್ರಾದೇಶಿಕ ಭಾಷೆಗಳನ್ನು ಕಲಿಸುತ್ತಿರುವ ಅತಿಥಿ ಶಿಕ್ಷಕರಿಗೂ ಸೂಕ್ತ ನ್ಯಾಯ ದೊರಕಲಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಅತಿಥಿ ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಕರ್ನಾಟಕ ತುಳು ಅಕಾಡೆಮಿಯ ಅಧ್ಯಕ್ಷರು ಸಚಿವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಅತಿಥಿ ಶಿಕ್ಷಕರ ಸಮಸ್ಯೆಗಳನ್ನು ಸಹ ಶೀಘ್ರದಲ್ಲೇ ಪರಿಹರಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಮುಂದಿನ 15 ದಿನಗಳಲ್ಲಿ ನೂತನ ಶಿಕ್ಷಣ ನೀತಿಯ ಸ್ಪಷ್ಟ ಚಿತ್ರಣ ದೊರೆಯಲಿದೆ. ಅದನ್ನು ಗಮನಿಸಿಕೊಂಡು ಅದಕ್ಕೆ ಪೂರಕವಾಗಿ ಅತಿಥಿ ಶಿಕ್ಷಕರ ಸಮಸ್ಯೆಯನ್ನು ಪರಿಹರಿಸಲು ಪ್ರಯತ್ನ ನಡೆಸಲಾಗುವುದು. ಅದಕ್ಕೆ ಅಗತ್ಯವಾದ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಮಾಡಬೇಕು ಎಂಬ ತುಳು ಅಕಾಡೆಮಿಯ ಧ್ವನಿಗೂ ಸಚಿವರು ಸಹಮತವನ್ನು ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.