ಬೆಳಗಾವಿ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಮಹಾ ಅಭಿಯಾನದ ಅಂಗವಾಗಿ ಜಿಲ್ಲೆಯಲ್ಲಿಯೂ ಜ. 15 ರಿಂದ ತೊಡಗಿದಂತೆ ಫೆ. 5 ರ ವರೆಗೆ ನಿಧಿ ಸಮರ್ಪಣಾ ಅಭಿಯಾನ ನಡೆಯಲಿದೆ ಎಂದು ವಿಶ್ವ ಹಿಂದೂ ಪರಿಷತ್ನ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಕೇಶವ ಹೆಗಡೆ ತಿಳಿಸಿದ್ದಾರೆ. ಈ ಕಾರ್ಯಕ್ಕೆ ವಿಎಚ್ಪಿ ಸಂಪೂರ್ಣ ಸಹಕಾರ ನೀಡಲಿದೆ ಎಂದು ಅವರು ಹೇಳಿದ್ದಾರೆ.
ಈ ಅಭಿಯಾನದಲ್ಲಿ ದೇಶದ 500 ಜಿಲ್ಲೆ, ತಾಲೂಕು, ಹೋಬಳಿ ಮತ್ತು 4 ಲಕ್ಷ ಹಳ್ಳಿಗಳಲ್ಲಿ ನೆಲೆಸಿರುವ ಸುಮಾರು 11 ಕೋಟಿ ಜನರನ್ನು ತಲುಪುವುದಕ್ಕೆ ಪೂರಕವಾಗುವಂತೆ ಕಾರ್ಯಯೋಜನೆ ಹಮ್ಮಿಕೊಳ್ಳಲಾಗಿದೆ. ರಾಜ್ಯಕ್ಕೆ ಸಂಬಂಧಿಸಿದಂತೆ ಸುಮಾರು 27,500 ಹಳ್ಳಿಗಳನ್ನು, ಸುಮಾರು 90 ಲಕ್ಷ ರಾಮಭಕ್ತರನ್ನು ತಲುಪುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿದ್ದು, ಈ ಅಭಿಯಾನ ಯಶಸ್ವಿಯಾಗಲಿದೆ ಎಂದು ತಿಳಿಸಿದ್ದಾರೆ. ಈ ಮಹತ್ಕಾರ್ಯದಲ್ಲಿ ವಿಎಚ್ಪಿ ಕಾರ್ಯಕರ್ತರು ಮತ್ತು ದೇಶದ ಕೋಟ್ಯಂತರ ರಾಮಭಕ್ತರು ಸಕ್ರಿಯವಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ಹೇಳಿದ್ದಾರೆ.
ದೇಶದಲ್ಲಿ ಶ್ರೀರಾಮ ಮಂದಿರ ನಿರ್ಮಾಣವಾಗುತ್ತಿರುವುದು ಸಂತೋಷದ ವಿಚಾರ. ಈ ಮಂದಿರ ನಿರ್ಮಾಣ ಕಾರ್ಯವು ಸಮಾಜದ ಮೇಲುಕೀಳು ಎಂಬ ಮನಸ್ಥಿತಿಯನ್ನು ನಿರ್ನಾಮ ಮಾಡಲಿದೆ. ಈ ಅಭಿಯಾನ ಮತ್ತು ಮಂದಿರ ನಿರ್ಮಾಣವು ಹಿಂದೂ ಸಮಾಜವನ್ನು ಮತ್ತಷ್ಟು ಜಾಗೃತಗೊಳಿಸಲಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮುಂದಿನ ಮೂರು ನಾಲ್ಕು ವರ್ಷಗಳಲ್ಲಿಯೇ ಅಯೋಧ್ಯೆಯಲ್ಲಿ ರಾಮನ ನೂತನ ಮಂದಿರ ನಿರ್ಮಾಣ ಕಾರ್ಯ ಸಂಪೂರ್ಣಗೊಳ್ಳಲಿದೆ ಎಂದು ಕೇಶವ್ ಹೆಗಡೆ ಹೇಳಿಕೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.