ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ, ವಿದೇಶಾಂಗ ಸಚಿವಾಲಯವು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದು, ಎಲೆಕ್ಟ್ರಾನಿಕಲಿ ಟ್ರಾನ್ಸ್ಮಿಟೆಡ್ ಪೋಸ್ಟರ್ ಬ್ಯಾಲೆಟ್ ಸಿಸ್ಟಮ್ (ಇಟಿಪಿಬಿಎಸ್) ಮೂಲಕ ಅನಿವಾಸಿ ಭಾರತೀಯರಿಗೆ (ಎನ್ಆರ್ಐ) ದೂರದಿಂದಲೇ ಮತ ಚಲಾಯಿಸಲು ಅವಕಾಶ ನೀಡುವ ಮತದಾನ ಸಮಿತಿಯ ಪ್ರಸ್ತಾಪದ ಪರವಾಗಿ ಇರುವುದಾಗಿ ತಿಳಿಸಿದೆ.
ಅಂಚೆ ಮತಪತ್ರಗಳ ಮೂಲಕ ಮತ ಚಲಾಯಿಸಲು ಅನುವು ಮಾಡಿಕೊಡುವಂತೆ 1961 ರ ಚುನಾವಣಾ ನಿಯಮಗಳಿಗೆ ತಿದ್ದುಪಡಿ ಮಾಡಲು ಚುನಾವಣಾ ಆಯೋಗ ಕಳೆದ ವರ್ಷ ನವೆಂಬರ್ 27 ರಂದು ಪ್ರಸ್ತಾಪಿಸಿದ ನಂತರ ಈ ಬೆಳವಣಿಗೆ ನಡೆದಿದೆ.
ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಪುದುಚೇರಿ ಮತ್ತು ಕೇರಳದ ಶಾಸಕಾಂಗ ಸಭೆಗಳಿಗೆ ನಡೆಯಲಿರುವ ಮುಂಬರುವ ಚುನಾವಣೆಯಲ್ಲಿ ಸೌಲಭ್ಯವನ್ನು ವಿಸ್ತರಿಸಲು “ತಾಂತ್ರಿಕವಾಗಿ ಮತ್ತು ಆಡಳಿತಾತ್ಮಕವಾಗಿ” ಸಿದ್ಧವಾಗಿದೆ ಎಂದು ಇಸಿ ನವೆಂಬರ್ 27 ರಂದು ಕಾನೂನು ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ ತಿಳಿಸಿದೆ.
ಈ ಪ್ರಸ್ತಾಪವು ಕಾರ್ಯರೂಪಕ್ಕೆ ಬಂದರೆ, ಅನಿವಾಸಿ ಭಾರತೀಯರಿಗೆ ತಮ್ಮ ವಾಸಸ್ಥಳದಿಂದ ಮತ ಚಲಾಯಿಸಲು ಸಾಧ್ಯವಾಗುತ್ತದೆ. ಪ್ರಸ್ತುತ ಅನಿವಾಸಿ ಭಾರತೀಯರಿಗೆ ತಮ್ಮ ಮತಗಳನ್ನು ಭಾರತದ ಆಯಾ ಕ್ಷೇತ್ರಗಳಿಗೆ ಬಂದು ಖುದ್ದಾಗಿ ಮತ ನೀಡುವುದನ್ನು ಬಿಟ್ಟು ಬೇರೆ ದಾರಿಯಿಲ್ಲದ ಕಾರಣ ಇದು ಪ್ರಾಮುಖ್ಯತೆಯನ್ನು ಪಡೆಯುತ್ತದೆ.
ಪ್ರಸ್ತುತ, ಸಶಸ್ತ್ರ ಪಡೆಗಳಲ್ಲಿ ಮತ್ತು ಪ್ಯಾರಾ ಮಿಲಿಟರಿ ಪಡೆಗಳಲ್ಲಿ ಸೇವೆ ಸಲ್ಲಿಸುವ ಸೇವಾ ಮತದಾರರಿಗೆ ಇಟಿಪಿಬಿಎಸ್ ಸೌಲಭ್ಯ ಲಭ್ಯವಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.