ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಕರ್ನಾಟಕದ ಮಂಗಳೂರು – ಕೇರಳದ ಕೊಚ್ಚಿ ನಡುವಿನ ನೈಸರ್ಗಿಕ ಅನಿಲ ಕೊಳವೆ ಮಾರ್ಗವನ್ನು ಇಂದು ದೇಶಕ್ಕೆ ಸಮರ್ಪಿಸಿದರು.
ಈ ಕಾರ್ಯಕ್ರಮ ‘ಒಂದು ರಾಷ್ಟ್ರ ಒಂದು ಅನಿಲ ಗ್ರಿಡ್’ ರಚನೆಯಲ್ಲಿ ಪ್ರಮುಖ ಮೈಲಿಗಲ್ಲಾಗಿದೆ. ಈ ಸಂದರ್ಭದಲ್ಲಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರೊಂದಿಗೆ ಕರ್ನಾಟಕ ಮತ್ತು ಕೇರಳ ರಾಜ್ಯಗಳ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಮೋದಿ, “ಈ ನೈಸರ್ಗಿಕ ಅನಿಲ ಕೊಳವೆ ಮಾರ್ಗ ಕರ್ನಾಟಕ ಮತ್ತು ಕೇರಳ ರಾಜ್ಯಗಳಲ್ಲಿ ಅಭಿವೃದ್ಧಿಯ ವೇಗವನ್ನು ವೃದ್ಧಿಸಲಿದೆ. ಉದ್ಯೋಗ ಮತ್ತು ಸ್ವ ಉದ್ಯೋಗದ ಪರಿಸರ ವ್ಯವಸ್ಥೆಯನ್ನು ಉತ್ತೇಜಿಸಲಿದೆ. ಪರಿಸರ ಮಾಲಿನ್ಯವನ್ನು ಕಡಿಮೆ ಮಾಡಲಿದೆ” ಎಂದು ಹೇಳಿದರು.
“ಅನಿಲ ಆಧಾರಿತ ಆರ್ಥಿಕತೆ ಯಾಗುವದು ನಾವು ಗಮನವನ್ನು ಹರಿಸಿದ್ದು, ದೇಶದಲ್ಲಿ 16000 ಕಿಮೀ ನೈಸರ್ಗಿಕ ಅನಿಲ ನಿರ್ಮಾಣ ಕಾರ್ಯ ನಡೆಯುತ್ತಿದೆ. ಶೀಘ್ರದಲ್ಲೇ ಇದು ಸಂಪೂರ್ಣಗೊಳ್ಳಲಿದೆ” ಎಂದರು.
450 ಕಿ.ಮೀ. ಉದ್ದದ ಈ ಕೊಳವೆ ಮಾರ್ಗವನ್ನು ಜಿ.ಎ.ಐ.ಎಲ್. (ಇಂಡಿಯಾ) ಲಿ., ನಿರ್ಮಿಸಿದೆ. ಇದು ಪ್ರತಿನಿತ್ಯ 12 ದಶಲಕ್ಷ ಮೆಟ್ರಿಕ್ ಸ್ಟಾಂಡರ್ಡ್ ಕ್ಯುಬಿಕ್ ಮೀಟರ್ ಅನಿಲ ಸಾಗಿಸುವ ಸಾಮರ್ಥ್ಯವನ್ನು ಹೊಂದಿದ್ದು, ಕೇರಳದ ಕೊಚ್ಚಿಯ ಧ್ರವೀಕೃತ ನೈಸರ್ಗಿಕ ಅನಿಲ (ಎನ್.ಎನ್.ಜಿ) ಮರುಹೊಂದಾಣಿಕೆ ಟರ್ಮಿನಲ್ ನಿಂದ ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಮಲಪುರಂ, ಕೋಯಿಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಯ ಮೂಲಕ ಹಾದೂ ಕರ್ನಾಟಕದ, ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿಗೆ ನೈಸರ್ಗಿಕ ಅನಿಲವನ್ನು ಸಾಗಿಸುತ್ತದೆ. ಯೋಜನೆಯ ಒಟ್ಟು ವೆಚ್ಚ ಸುಮಾರು 3000 ಕೋಟಿ ರೂ.ಗಳಾಗಿದ್ದು, ಅದರ ನಿರ್ಮಾಣವು 12 ಲಕ್ಷ ಮಾನವ-ದಿನಗಳ ಉದ್ಯೋಗವನ್ನು ಸೃಷ್ಟಿಸಿತ್ತು. ಕೊಳವೆ ಮಾರ್ಗ ಅಳವಡಿಕೆಯು ಎಂಜಿನಿಯರಿಂಗ್ ಸವಾಲಾಗಿತ್ತು, ಏಕೆಂದರೆ ಕೊಳವೆ ಮಾರ್ಗವು 100ಕ್ಕೂ ಹೆಚ್ಚು ಸ್ಥಳಗಳಲ್ಲಿ ಜಲಮೂಲಗಳನ್ನು ದಾಟುವುದು ಅನಿವಾರ್ಯವಾಗಿತ್ತು.
ಈ ಕೊಳವೆ ಮಾರ್ಗ ಪರಿಸರ ಸ್ನೇಹಿ ಮತ್ತು ಕೈಗೆಟಕುವ ದರದ ಇಂಧನವನ್ನು ಕೊಳವೆ ಮಾರ್ಗದ ನೈಸರ್ಗಿಕ ಅನಿಲ (ಪಿ.ಎನ್.ಜಿ.)ರೂಪದಲ್ಲಿ ಮನೆಗಳಿಗೆ ಪೂರೈಸಲಿದೆ ಮತ್ತು ಸಂಕುಚಿತ ನೈಸರ್ಗಿಕ ಅನಿಲ (ಸಿ.ಎನ್.ಜಿ.)ಯನ್ನು ಸಾರಿಗೆ ವಲಯಕ್ಕೆ ಸರಬರಾಜು ಮಾಡಲಿದೆ. ಇದು ನೈಸರ್ಗಿಕ ಅನಿಲವನ್ನು ಜಿಲ್ಲೆಯಾದ್ಯಂತದ ವಾಣಿಜ್ಯ ಮತ್ತು ಕೈಗಾರಿಕಾ ಘಟಕಗಳಿಗೆ ಕೊಳವೆ ಮಾರ್ಗದಲ್ಲಿ ಪೂರೈಸಲಿದೆ. ಶುದ್ಧ ಇಂಧನದ ಬಳಕೆಯು ವಾಯು ಮಾಲಿನ್ಯವನ್ನು ನಿಗ್ರಹಿಸಿ, ವಾಯು ಗುಣಮಟ್ಟವನ್ನು ಸುಧಾರಿಸುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.