ಬಾಗಲಕೋಟೆ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಪ್ರಾಂತ ಕಾರ್ಯಾಲಯ ಹೊಸಬೂರ ನಿವಾಸ, ಭವಾನಿನಗರ, ಹುಬ್ಬಳ್ಳಿ ವತಿಯಿಂದ ಪತ್ರಿಕಾಗೋಷ್ಠಿ ನಡೆಯಿತು.
ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಬೇರೆಲ್ಲಾ ಕಟ್ಟಡಗಳ ನಿರ್ಮಾಣದಂತಲ್ಲ. ಇದು ಜಾಗೃತ ಶಕ್ತಿಯ ಪುನರುತ್ಥಾನವಾಗಿದೆ. ಸಮಾನತೆಯ ಆಶಯದ ಸಮಾಜವನ್ನು ಸೃಷ್ಟಿಸುವ, ಸಾಮಾಜಿಕ ನ್ಯೂನತೆಗಳನ್ನು ನಿರ್ಮೂಲನೆ ಮಾಡುವ, ಮಹಿಳೆಯರ ಘನತೆಯನ್ನು ಮರು ಸ್ಥಾಪಿಸುವ, ಭಯೋತ್ಪಾದನೆಯ ನಿರ್ಮೂಲನದ ಆಶಯದಿಂದ ಈ ಭವ್ಯ ಮಂದಿರ ನಿರ್ಮಾಣ ಕಾರ್ಯ ನಡೆಯಲಿದೆ ಎಂದು ಉತ್ತರ ಪ್ರಾಂತ ಸಹ ಅಭಿಯಾನ ಪ್ರಮುಖ್, ವಿಹಿಂಪದ ಪ್ರಾಂತ ಸಹ ಸಂಘಟನಾ ಕಾರ್ಯದರ್ಶಿ ಅವರು ತಿಳಿಸಿದ್ದಾರೆ.
ದೇಶದಲ್ಲಿ 4 ಲಕ್ಷ ಹಳ್ಳಿಗಳನ್ನು, 11 ಕೋಟಿ ಕುಟುಂಬಗಳನ್ನು ತಲುಪಲಿದ್ದಾರೆ. ಕರ್ನಾಟಕ ರಾಜ್ಯದಲ್ಲಿ 27,500 ಹಳ್ಳಿಗಳನ್ನು, ಸುಮಾರು 90 ಲಕ್ಷ ರಾಮಭಕ್ತರನ್ನು ತಲುಪುವ, ರಾಮಮಂದಿರಕ್ಕೆ ಧನ ಸಂಗ್ರಹಿಸುವ ಯೋಜನೆಯನ್ನು ವಿಹಿಂಪ ಹಾಕಿಕೊಂಡಿದೆ. 5 ಕಾರ್ಯಕರ್ತರನ್ನು ಒಳಗೊಂಡ ತಂಡ ಈ ನಿಧಿ ಸಮರ್ಪಣಾ ಅಭಿಯಾನದಲ್ಲಿ ಇರುತ್ತದೆ. ಸಂಗ್ರಹಿತ ಮೊತ್ತವನ್ನು 48 ಗಂಟೆಯೊಳಗೆ ತೀರ್ಥಕ್ಷೇತ್ರ ಟ್ರಸ್ಟ್ ನ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ತನ್ನ ತಂಡದಲ್ಲಿ ಸಂಗ್ರಹವಾದಹಣವನ್ನು ಜಮೆ ಮಾಡುವ ಪ್ರತಿ ಕಾರ್ಯಕರ್ತರಿಗೆ ಹತ್ತಿರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಥವಾ ಬ್ಯಾಂಕ್ ಆಫ್ ಬರೋಡಾ ಅಥವಾ ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ನೋಂದಣಿ ಸಂಖ್ಯೆ ನೀಡಲಾಗುತ್ತದೆ. ಹಣ ಸಂಗ್ರಹಣೆ, ಖಾತೆಗೆ ಪಾವತಿಸುವಲ್ಲಿ ವ್ಯವಸ್ಥೆಯು ಸಂಪೂರ್ಣ ಪಾರದರ್ಶಕವಾಗಿರುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.