ನವದೆಹಲಿ: ಕೊರೋನಾ ಸೋಂಕಿನ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಅನೇಕ ವಿಧಗಳಲ್ಲಿ ಪ್ರಯತ್ನ ನಡೆಸುತ್ತಿದೆ. ಇದೇ ಸಂದರ್ಭದಲ್ಲಿ ಕೊರೋನಾ ಹೆಸರಿನಲ್ಲಿ ಕೆಲವು ನಕಲಿ ಆ್ಯಪ್ ಗಳು ಸಹ ಕಂಡುಬರುತ್ತಿದ್ದು ಅವುಗಳ ಬಗ್ಗೆ ಎಚ್ಚರದಿಂದ ಇರುವಂತೆ ಕೇಂದ್ರ ಸರ್ಕಾರ ಸಾರ್ವಜನಿಕರಿಗೆ ಮನವಿಯನ್ನು ಮಾಡಿದೆ.
ಪ್ರಸ್ತುತ ಗೂಗಲ್ ಪ್ಲೇಸ್ಟೋರ್ನಲ್ಲಿ ಕೋವಿನ್ ಎಂಬ ಆ್ಯಪ್ ಕೊರೋನಾಗೆ ಸಂಬಂಧಿಸಿದ ಆ್ಯಪ್ ಎಂಬುದಾಗಿ ದೊರೆಯುತ್ತಿರುವುದು ಕಂಡುಬಂದಿದೆ. ಈ ಹೆಸರಿನ ಯಾವುದೇ ಆ್ಯಪ್ ಅನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿಲ್ಲ. ಇದು ನಕಲಿ ಆ್ಯಪ್ ಆಗಿದೆ. ಈ ಸಂಬಂಧ ಎಚ್ಚರದಲ್ಲಿರುವಂತೆ ಸರ್ಕಾರ ಸೂಚಿಸಿದೆ.
ಈ ಆ್ಯಪ್ ಬಳಕೆದಾರರಿಗೆ ಕೊರೋನಾ ಲಸಿಕೆ ಕುರಿತಾದ ಮಾಹಿತಿ, ನೋಂದಣಿ, ಮೇಲುಸ್ತುವಾರಿ ಸೇರಿದಂತೆ ಇನ್ನೂ ಹಲವು ವಿಷಯಗಳ ಬಗ್ಗೆ ಮಾಹಿತಿಯನ್ನು ನೀಡಲು ಸರ್ಕಾರ ಬಿಡುಗಡೆ ಮಾಡಿರುವುದಾಗಿ ತಿಳಿಸಿದೆ. ಆದರೆ ಕೇಂದ್ರ ಸರ್ಕಾರ ಇಂತಹ ಯಾವುದೇ ಆ್ಯಪ್ ಅನ್ನು ಬಿಡುಗಡೆ ಮಾಡಿಲ್ಲ.ಈ ಆ್ಯಪ್ ಅನ್ನು ಡೌನ್ಲೋಡ್ ಮಾಡದಂತೆ ಮತ್ತು ಈಗಾಗಲೇ ಡೌನ್ಲೋಡ್ ಮಾಡಿರುವವರು ಅದನ್ನು ಬಳಕೆ ಮಾಡದಂತೆಯೂ ಕೋಂದ್ರ ಸರ್ಕಾರ ಮನವಿ ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.