ಬೆಂಗಳೂರು: ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಈ ಬಾರಿ ನಡೆಯುವ 13 ನೇ ಏರೋ ಇಂಡಿಯಾ ವೈಮಾನಿಕ ಪ್ರದರ್ಶನವನ್ನು 5 ದಿನಗಳ ಬದಲಾಗಿ 3 ದಿನಗಳ ಕಾಲ ನಡೆಸಲು ತೀರ್ಮಾನಿಸಲಾಗಿದೆ.
ಈ ವೈಮಾನಿಕ ಪ್ರದರ್ಶನಕ್ಕೆ ಸಾರ್ವಜನಿಕರ ಪ್ರವೇಶವನ್ನು ಸಹ ನಿಷೇಧಿಸಲಾಗಿದೆ. ಯಲಹಂಕದ ವಾಯುನೆಲೆಯಲ್ಲಿ ಫೆ.3 ರಿಂದ ಫೆ. 7 ರ ವರೆಗೆ ನಡೆಯಬೇಕಾಗಿದ್ದ 5 ದಿನಗಳ ಏರೋ ಇಂಡಿಯಾ ಏರ್ ಶೋವನ್ನು ಕೇವಲ 3 ದಿನಗಳ ಕಾಲ ನಡೆಸಲಾಗುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಾರ್ವಜನಿಕರ ಪ್ರವೇಶಕ್ಕೆ ಅವಕಾಶವನ್ನು ನೀಡಲಾಗಿದ್ದ ಕಡೆಯ 2 ದಿನಗಳ ವೈಮಾನಿಕ ಪ್ರದರ್ಶನವನ್ನು ರದ್ದು ಮಾಡಲಾಗಿರುವುದಾಗಿಯೂ ಆಯೋಜಕರು ಈ ಸಂಬಂಧ ಮಾಹಿತಿ ನೀಡಿದ್ದಾರೆ.
ಫೆ.2 ರಂದು ಪ್ರದರ್ಶನದ ತಾಲೀಮು ನಡೆಯಲಿದೆ. ಫೆ. 3 ರಂದು ಬೆಳಗ್ಗೆ 9 ಗಂಟೆಯ ಸುಮಾರಿಗೆ ಏರೋ ಇಂಡಿಯಾ ಏರ್ ಶೋ ಗೆ ಚಾಲನೆ ದೊರೆಯಲಿದೆ. ವೈಮಾನಿಕ ಪ್ರದರ್ಶನಗಳು ಆರಂಭವಾಗಲಿವೆ. ಅದಾದ ಬಳಿಕ ಫೆ.4 ಮತ್ತು ಫೆ. 5 ರಂದು ಬೆಳಗ್ಗೆ 9.30 ಮತ್ತು ಅಪರಾಹ್ನ 2.30 ಕ್ಕೆ ವೈಮಾನಿಕ ಪ್ರದರ್ಶನಗಳು ನಡೆಯಲಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.