ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು ತಮ್ಮ ಪಟ್ಟು ಸಡಿಲಿಸುವಂತೆ ಕಾಣುತ್ತಿಲ್ಲ. ಆದರೆ ಸರ್ಕಾರ ಅವರ ಮನವೊಲಿಸುವ ಕಾರ್ಯವನ್ನು ಮುಂದುವರೆಸಿದೆ. ಇಂದು ರೈತರು ಮತ್ತು ಸರ್ಕಾರದ ನಡುವೆ 8ನೇ ಸುತ್ತಿನ ಮಾತುಕತೆ ನಡೆಯಲಿದೆ.
ಒಂದು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿರುವ ರೈತರು ಹಾಗೂ ಸರ್ಕಾರದ ನಡುವೆ ಇಂದು ಎಂಟನೇ ಸುತ್ತಿನ ಮಾತುಕತೆ ನಡೆಯಲಿದೆ. ಕಾಯ್ದೆಯಿಂದ ರೈತರಿಗೆ ನಷ್ಟವಾಗುತ್ತದೆ ಎಂಬುದು ರೈತರ ಅಭಿಪ್ರಾಯವಾದರೆ, ರೈತರ ಆದಾಯ ಕಾಯ್ದೆಗಳಿಂದ ವೃದ್ಧಿಯಾಗುತ್ತದೆ ಎಂಬುದು ಸರ್ಕಾರದ ವಾದವಾಗಿದೆ.
ಜನವರಿ 26ರೊಳಗೆ ನಮ್ಮ ಬೇಡಿಕೆ ಈಡೇರಿಸಬೇಕು ಇಲ್ಲವಾದಲ್ಲಿ ಗಣರಾಜ್ಯೋತ್ಸವದಂದು ದೆಹಲಿಗೆ ನುಗ್ಗುವುದಾಗಿ ರೈತರು ಎಚ್ಚರಿಕೆ ನೀಡಿದ್ದಾರೆ. ಅದರಂತೆ ರಾಜಧಾನಿಯ ಹೊರವಲಯದಲ್ಲಿ ಗುರುವಾರ ಟ್ರಾಕ್ಟರ್ ತಾಲೀಮು ಕೂಡ ಆರಂಭಿಸಿದ್ದಾರೆ ಎಂದು ಮೂಲಗಳು ತಿಳಿಸಿದೆ.
ಜನವರಿ 4ರಂದು ಏಳನೇ ಸುತ್ತಿನ ಮಾತುಕತೆ ನಡೆದಿತ್ತು.
ಇಂದು ದೆಹಲಿ ವಿಜ್ಞಾನಭವನದಲ್ಲಿ ಮಧ್ಯಾಹ್ನ 2 ಗಂಟೆಗೆ ರೈತರು ಮತ್ತು ಕೇಂದ್ರ ಸರ್ಕಾರದ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಯಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.