ಬೆಂಗಳೂರು: ರಾಜ್ಯದಲ್ಲಿ ರೈತರ ಅಭಿವೃದ್ಧಿಯನ್ನು ಗಮನದಲ್ಲಿರಿಸಿಕೊಂಡು ರಾಜ್ಯ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿದೆ. ಇದೀಗ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುವ ಉದ್ಯೋಗಿಗಳಂತೆಯೇ ರೈತರಿಗೂ ‘ಸ್ವಾಭಿಮಾನಿ ರೈತ’ ಎಂಬ ಗುರುತಿನ ಚೀಟಿಯನ್ನು ಒದಗಿಸಲು ಸರ್ಕಾರ ಚಿಂತನೆ ನಡೆಸಿದೆ.
ಜ. 9 ರಂದು ಕೊಪ್ಪಳದಲ್ಲಿ ಕೃಷಿ ಸಚಿವ ಬಿ. ಸಿ. ಪಾಟೀಲ್ ಅವರು ಸ್ವಾಭಿಮಾನಿ ರೈತ ಗುರುತಿನ ಚೀಟಿಗೆ ಚಾಲನೆ ನೀಡಲಿದ್ದಾರೆ. ತಂತ್ರಾಂಶಗಳಲ್ಲಿ ನೋಂದಣಿ ಮಾಡಿಕೊಂಡಿರುವ ರೈತರಿಗೆ ಈ ಗುರುತಿನ ಚೀಟಿಗಳನ್ನು ವಿತರಣೆ ಮಾಡಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ. ಈ ಗುರುತಿನ ಚೀಟಿಯ ಆಧಾರದಲ್ಲಿ ರೈತರಿಗೆ ಫ್ರುಟ್ಸ್ ತಂತ್ರಜ್ಞಾನದಲ್ಲಿ ನೋಂದಾಯಿಸಿಕೊಂಡಿರುವ ಎಲ್ಲಾ ಇಲಾಖೆಗಳಿಂದಲೂ ಸೌಲಭ್ಯಗಳನ್ನು ಪಡೆಯುವುದು ಸಾಧ್ಯವಾಗಲಿದೆ. ಫ್ರುಟ್ಸ್ ತಂತ್ರಾಂಶದಲ್ಲಿ ನೋಂದಣಿ ಪ್ರಕ್ರಿಯೆ 2018 ರಿಂದಲೇ ಆರಂಭವಾಗಿದ್ದು ಕೃಷಿ, ತೋಟಗಾರಿಕೆ, ಪಶು ಸಂಗೋಪನೆ, ರೇಷ್ಮೆ ಸೇರಿದಂತೆ ಇನ್ನಿತರ ಕೃಷಿ ವಲಯಗಳಲ್ಲಿ ರೈತರನ್ನು ನೋಂದಣಿ ಮಾಡಲಾಗುತ್ತಿದೆ.
ಈ ಚೀಟಿಯು ಒಂದು ವ್ಯಾವಹಾರಿಕ ಗುರುತಿನ ಚೀಟಿಯಾಗಲಿದ್ದು, ಇದು ರೈತರಿಗೆ ಬೆಳೆ ಸಾಲ, ಪಿಎಂ ಕಿಸಾನ್ ಯೋಜನೆ ಸೇರಿದಂತೆ ಇನ್ನೂ ಹಲವಾರು ಯೋಜನೆಗಳಿಗೆ ಸಂಬಂಧಿಸಿದಂತೆ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲಿದೆ. ಜೊತೆಗೆ ಸಮಯದ ಉಳಿತಾಯಕ್ಕೂ ಪೂರಕವಾಗಲಿದೆ ಎಂದು ಸರ್ಕಾರ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.