ಹುಬ್ಬಳ್ಳಿ: ರಾಜ್ಯದಲ್ಲಿ ಇತ್ತೀಚೆಗಷ್ಟೇ ಗ್ರಾಮ ಪಂಚಾಯತ್ ಚುನಾವಣೆಗಳು ನಡೆದಿವೆ. ಈ ಚುನಾವಣೆಗಳಲ್ಲಿ ವಿಜಯಶಾಲಿಗಳಾದ ಬಿಜೆಪಿ ಬೆಂಬಲಿತ ಸದಸ್ಯರನ್ನು ಸನ್ಮಾನಿಸುವ ಸಲುವಾಗಿ ಮತ್ತು ಮುಂದಿನ ತಾಲೂಕು, ಜಿಲ್ಲಾ ಪಂಚಾಯತ್ ಚುನಾವಣೆಗಳಲ್ಲಿ ಬಿಜೆಪಿ ಜಯಗಳಿಸುವಂತೆ ಮಾಡುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಜ. 11 ರಿಂದ 13 ರ ವರೆಗೆ ‘ಜನಸೇವಕ’ ಸಮಾವೇಶವನ್ನು ಬಿಜೆಪಿ ನಡೆಸಲಿದೆ ಎಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ತಿಳಿಸಿದರು.
ಈ ಸಮಾವೇಶದ ಸಮಾರೋಪ ಸಮಾರಂಭ ಜ. 17 ರಂದು ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಅಪರಾಹ್ನ 3 ಗಂಟೆಗೆ ನಡೆಯುವ ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾಗವಹಿಸಲಿದ್ದಾರೆ ಎಂದು ಟೆಂಗಿನಕಾಯಿ ಮಾಹಿತಿ ನೀಡಿದ್ದಾರೆ.
ಜ. 11 ರಂದು ಈ ಸಮಾವೇಶಕ್ಕೆ ಮೈಸೂರಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ. ಪ್ರತಿದಿನ 2 ಜಿಲ್ಲೆಗಳಿಗೆ ಸಂಬಂಧಿಸಿದಂತೆ ಸಮಾವೇಶಗಳು ನಡೆಯಲಿವೆ. ಇದಕ್ಕಾಗಿ 5 ತಂಡಗಳನ್ನು ಸಹ ರಚನೆ ಮಾಡಲಾಗಿದೆ. ಬಿಜೆಪಿ ಸರ್ಕಾರದ ಸಾಧನೆ, ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ನಿಟ್ಟಿನಲ್ಲಿ ಈ ಸಮಾವೇಶ ಪೂರಕವಾಗಲಿದೆ ಎಂದು ಟೆಂಗಿನಕಾಯಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.