ನವದೆಹಲಿ: ಭಾರತದ ಕೊರೊನಾವೈರಸ್ ವ್ಯಾಕ್ಸಿನೇಷನ್ ಡ್ರೈವ್ ಜನವರಿ 16 ರಿಂದ ಪ್ರಾರಂಭವಾಗಲಿದೆ ಎಂದು ಸರ್ಕಾರ ಇಂದು ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ದೇಶದ ಕೋವಿಡ್ ಪರಿಸ್ಥಿತಿಯನ್ನು ಪರಿಶೀಲಿಸಿದ ಮತ್ತು ಲಸಿಕೆ ಜಾರಿಯ ವಿವರಗಳನ್ನು ಅಂತಿಮಗೊಳಿಸಿದ ಬಳಿಕ ಈ ನಿರ್ಧಾರ ಹೊರಬಿದ್ದಿದೆ.
ಪ್ರಧಾನ ಮಂತ್ರಿ ಈ ಸುದ್ದಿಯನ್ನು “ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಇದು ಹೆಗ್ಗುರುತಿನ ಹೆಜ್ಜೆ” ಎಂದು ಕರೆದಿದ್ದಾರೆ.
ಸಾಂಕ್ರಾಮಿಕ ರೋಗದ ವಿರುದ್ಧ ನೇರವಾಗಿ ತೊಡಗಿಸಿಕೊಂಡಿರುವ ವೈದ್ಯರು, ಸಮುದಾಯ ಆರೋಗ್ಯ ಕಾರ್ಯಕರ್ತರು ಮತ್ತು ಪೊಲೀಸರಂತಹ ಸುಮಾರು ಒಂದು ಕೋಟಿ ಆರೋಗ್ಯ ಕಾರ್ಯಕರ್ತರು ಮತ್ತು ಎರಡು ಕೋಟಿ ಮುಂಚೂಣಿ ಸಿಬ್ಬಂದಿಗೆ ಲಸಿಕೆ ನೀಡುವಲ್ಲಿ ಆದ್ಯತೆ ನೀಡಲಾಗುವುದು. ಇವರಿಗೆ ಲಸಿಕೆ ಉಚಿತವಾಗಿ ನೀಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಕಳೆದ ವಾರ ಹೇಳಿದ್ದರು.
ನಂತರ 50 ವರ್ಷಕ್ಕಿಂತ ಮೇಲ್ಪಟ್ಟ ಜನರು, ನಂತರ 50 ವರ್ಷದೊಳಗಿನವರು ಆದ್ಯತೆಯ ಗುಂಪು ಆಗಲಿದ್ದಾರೆ. ಮೊದಲ ಹಂತದಲ್ಲಿ ಸುಮಾರು 30 ಕೋಟಿ ಜನರಿಗೆ ಲಸಿಕೆ ನೀಡುವ ನಿರೀಕ್ಷೆಯಿದೆ.
ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿ, “ಜನವರಿ 16 ರಂದು ಭಾರತವು ಕೋವಿಡ್-19 ವಿರುದ್ಧ ಹೋರಾಡುವಲ್ಲಿ ಒಂದು ಹೆಗ್ಗುರುತಿನ ಹೆಜ್ಜೆ ಇಡಲಿದೆ. ಆ ದಿನದಿಂದ ಭಾರತದ ರಾಷ್ಟ್ರವ್ಯಾಪಿ ವ್ಯಾಕ್ಸಿನೇಷನ್ ಡ್ರೈವ್ ಪ್ರಾರಂಭವಾಗುತ್ತದೆ. ನಮ್ಮ ಸಾಹಸಿ ವೈದ್ಯರು, ಆರೋಗ್ಯ ಕಾರ್ಯಕರ್ತರು, ಸ್ವಚ್ಛತಾ ಕಾರ್ಮಿಕರು ಮತ್ತು ಮುಂಚೂಣಿ ಕಾರ್ಯಕರ್ತರಿಗೆ ಆದ್ಯತೆ ನೀಡಲಾಗುವುದು” ಎಂದಿದ್ದಾರೆ.
On 16th January, India takes a landmark step forward in fighting COVID-19. Starting that day, India’s nation-wide vaccination drive begins. Priority will be given to our brave doctors, healthcare workers, frontline workers including Safai Karamcharis. https://t.co/P5Arw64wVt
— Narendra Modi (@narendramodi) January 9, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.