ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 19 ಸಾವಿರದಷ್ಟು ಕೋವಿಡ್ ರೋಗಿಗಳು ಚೇತರಿಸಿಕೊಂಡಿದ್ದು, ದೇಶದ ಕೋವಿಡ್ -19 ಚೇತರಿಕೆ ಪ್ರಮಾಣವು ಶೇಕಡಾ 96.42 ಕ್ಕೆ ತಲುಪಿದೆ. ಒಟ್ಟು ಚೇತರಿಕೆಗಳ ಸಂಖ್ಯೆ ಒಂದು ಕೋಟಿ 75 ಸಾವಿರಕ್ಕೆ ಏರಿದೆ.
ಆರೋಗ್ಯ ಸಚಿವಾಲಯದ ಪ್ರಕಾರ, ಭಾರತದ ಕೋವಿಡ್ 19 ಚೇತರಿಕೆ ಪ್ರಮಾಣ 96.42% ಆಗಿದೆ. ಸಕ್ರಿಯ ಪ್ರಕರಣ ಪ್ರಸ್ತುತ ಒಟ್ಟು ಸಕಾರಾತ್ಮಕ ಪ್ರಕರಣಗಳಲ್ಲಿ ಕೇವಲ 2.14 ಶೇಕಡಾವನ್ನು ಮಾತ್ರ ಒಳಗೊಂಡಿದೆ. ಪ್ರಸ್ತುತ, ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ ಸುಮಾರು 2 ಲಕ್ಷ 23 ಸಾವಿರ.
ಪ್ರಸ್ತುತ ಭಾರತದ ಸಾವಿನ ಪ್ರಮಾಣವು ಶೇಕಡಾ 1.44 ರಷ್ಟಿದೆ, ಇದು ಜಾಗತಿಕವಾಗಿ ಅತ್ಯಂತ ಕಡಿಮೆ ಪ್ರಮಾಣದಲ್ಲಿದೆ. ಕಳೆದ 24 ಗಂಟೆಗಳಲ್ಲಿ, 201 ಸಾವುಗಳು ಸಂಭವಿಸಿದೆ. ಇದುವರೆಗಿನ ಒಟ್ಟು ಸಾವು ಒಂದು ಲಕ್ಷ 50 ಸಾವಿರದ 999 ಕ್ಕೆ ತಲುಪಿದೆ ಎಂದು ವರದಿಯಾಗಿದೆ.
ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಎಂಟು ಲಕ್ಷ 43 ಸಾವಿರಕ್ಕೂ ಹೆಚ್ಚು ಪರೀಕ್ಷೆಗಳನ್ನು ನಡೆಸಲಾಗಿದೆ. ಇಲ್ಲಿಯವರೆಗೆ ಪರೀಕ್ಷಿಸಿದ ಒಟ್ಟು ಮಾದರಿಗಳ ಸಂಖ್ಯೆ 18 ಕೋಟಿ 10 ಲಕ್ಷ ದಾಟಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.