ನವದೆಹಲಿ: ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯವು ಜನವರಿ 12 ರಿಂದ ದೇಶದಲ್ಲಿ ಒಂದು ವಾರಗಳ ಕಾಲ ರಾಷ್ಟ್ರೀಯ ಯುವ ಉತ್ಸವವನ್ನು ಆಯೋಜಿಸುತ್ತಿದೆ. ಪ್ರತಿವರ್ಷ, ಯುವ ಜನತೆಯ ಸ್ಪೂರ್ತಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ನೆನಪಿಗಾಗಿ ಈ ಉತ್ಸವವನ್ನು ಆಚರಿಸಲಾಗುತ್ತದೆ.
ಈ ವರ್ಷದ ಉತ್ಸವವನ್ನು ವರ್ಚುವಲ್ ಮೋಡ್ನಲ್ಲಿ ಆಯೋಜಿಸಲಾಗಿದ್ದು, ಪ್ರತಿ ರಾಜ್ಯದ ಪ್ರತಿಭೆಗಳು ಭಾಗಿಯಾಗಲಿದ್ದಾರೆ. ಸ್ಪರ್ಧಾತ್ಮಕ ಮತ್ತು ಸ್ಪರ್ಧಾತ್ಮಕವಲ್ಲದ ಸಾಂಸ್ಕೃತಿಕ ಕಾರ್ಯಕ್ರಮಗಳು, ಸಮರ ಕಲೆಗಳು, ಪ್ರದರ್ಶನಗಳು, ಬೌದ್ಧಿಕ ಪ್ರವಚನಗಳು, ಯುವ ಕಲಾವಿದರ ಶಿಬಿರಗಳು, ಸೆಮಿನಾರ್ಗಳು ಮತ್ತು ಸಾಹಸ ಕಾರ್ಯಕ್ರಮಗಳನ್ನು ಒಳಗೊಂಡಿರುವ ಸ್ಪರ್ಧಾತ್ಮಕ ಕಾರ್ಯಕ್ರಮಗಳು ರಾಷ್ಟ್ರೀಯ ಯುವ ಉತ್ಸವದ ಮಹತ್ವದ ಭಾಗಗಳಾಗಿವೆ. ಈ ಉತ್ಸವದಲ್ಲಿ ರಾಷ್ಟ್ರೀಯ ಯುವ ಪ್ರಶಸ್ತಿಗಳ ಪ್ರಸ್ತುತಿಯೂ ನಡೆಯುತ್ತದೆ.
ಕೇಂದ್ರ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವ ಕಿರೆನ್ ರಿಜ್ಜು ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಈ ತಿಂಗಳ 12 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಇದು ಯುವ ಸಂಸತ್ತಿನ ಕಾರ್ಯಕ್ರಮದೊಂದಿಗೆ ಮುಕ್ತಾಯಗೊಳ್ಳಲಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.