ಚಿಕ್ಕಮಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸುಗ್ರೀವಾಜ್ಞೆಯ ಮೂಲಕ ಜಾರಿಗೊಳಿಸಿದ ಗೋಹತ್ಯೆ ನಿಷೇಧ ಕಾಯ್ದೆಯಡಿಯಲ್ಲಿ ನಗರದಲ್ಲಿ ಮೊದಲ ಪ್ರಕರಣ ದಾಖಲಾಗಿದೆ.
ಹಾವೇರಿಯ ರಾಣೆಬೆನ್ನೂರಿನಿಂದ ಶೃಂಗೇರಿ ಮಾರ್ಗವಾಗಿ ಮಂಗಳೂರಿಗೆ ಕಂಟೈನರ್ ಮೂಲಕ ಸಾಗಾಟ ಮಾಡಲಾಗುತ್ತಿದ್ದ 34 ಜಾನುವಾರುಗಳನ್ನು ತನಿಕೋಡು ಚೆಕ್ಪೋಸ್ಟ್ ಸಮೀಪ ಯುವಕರ ತಂಡವೊಂದು ತಡೆದು ನಿಲ್ಲಿಸಿದೆ. ಶುಕ್ರವಾರ ಮುಂಜಾನೆ ಈ ಘಟನೆ ನಡೆದಿದ್ದು, ಓರ್ವ ಚಾಲಕ ಪರಾರಿಯಾಗಿದ್ದಾನೆ. ಮತ್ತೊಬ್ಬ ಚಾಲಕ ಮತ್ತು ಕಂಟೈನರ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಂಟೈನರ್ನಲ್ಲಿ ಗೋವುಗಳನ್ನು ಸಾಗಿಸುತ್ತಿದ್ದ ಇಬ್ಬರೂ ಚಾಲಕರ ಮೇಲೆ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗೋಹತ್ಯೆ ಪ್ರಕರಣದಡಿ ದಾಖಲಾದ ಮೊದಲ ಪ್ರಕರಣ ಇದಾಗಿದ್ದು, ಆರೋಪ ಸಾಬೀತಾದರೆ 3 ರಿಂದ 7 ವರ್ಷ ಜೈಲು ಶಿಕ್ಷೆಯ ಜೊತೆಗೆ 50 ಸಾವಿರದಿಂದ 5 ಲಕ್ಷಗಳಷ್ಟು ದಂಡ ವಿಧಿಸುವ ಸಾಧ್ಯತೆಗಳಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.