ಬೆಂಗಳೂರು: ಕೊರೋನ ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊರಡಿಸುವ ಮಾರ್ಗಸೂಚಿಯಲ್ಲಿ ಅವಕಾಶವಿದ್ದರೆ, ಲಸಿಕೆಯನ್ನು ಮೊದಲು ತಾನೇ ಪಡೆಯುವುದಾಗಿ ಸಚಿವ ಡಾ ಸುಧಾಕರ್ ಮಾಹಿತಿ ನೀಡಿದ್ದಾರೆ.
ಅವರು ನಗರದ ರಾಜ್ಯ ಮಟ್ಟದ ಲಸಿಕೆ ಸಂಗ್ರಹಣಾ ಕೇಂದ್ರದ ಬಳಿಯಲ್ಲಿ ಸುದ್ದಿಗಾರರೊಂದಿಗೆ ಈ ವಿಚಾರವನ್ನು ಹಂಚಿಕೊಂಡಿದ್ದಾರೆ.
ದೇಶದಲ್ಲಿ ಕೊರೋನ ಲಸಿಕೆಯ ವಿತರಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಾರ್ಗಸೂಚಿ ಹೊರಡಿಸಲಿದೆ. ಆ ಮಾರ್ಗಸೂಚಿಯಲ್ಲಿ ಯಾರಿಗೆ ಯಾವಾಗ ಲಸಿಕೆಯನ್ನು ಹೇಗೆ ನೀಡಬೇಕು ಎಂಬ ಬಗ್ಗೆ ಸಂಪೂರ್ಣ ಮಾಹಿತಿ ಇದೆ. ಲಸಿಕೆ ವಿತರಣೆಯ ಆರಂಭದಲ್ಲೇ ಜನಪ್ರತಿನಿಧಿಗಳಿಗೆ ಪಡೆಯುವ ಅವಕಾಶವನ್ನು ನೀಡಲಾಗಿದ್ದರೆ, ಲಸಿಕೆಯನ್ನು ಮೊದಲಿಗೆ ತಾನೇ ಪಡೆಯುತ್ತೇನೆ ಎಂದು ಅವರು ಹೇಳಿದ್ದಾರೆ. ಲಸಿಕೆಗೆ ಸಂಬಂಧಿಸಿದಂತೆ ಯಾವುದೇ ಆತಂಕ, ಅನುಮಾನಗಳನ್ನು ಹೊಂದುವ ಅಗತ್ಯವಿಲ್ಲ ಎಂದೂ ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.