ಬೆಂಗಳೂರು: ರಾಜ್ಯದ ಸಚಿವ ಸಂಪುಟ ಸೇರಿದಂತೆ ಇನ್ನಿತರ ವಿಚಾರಗಳ ಬಗ್ಗೆ ರಾಷ್ಟ್ರೀಯ ನಾಯಕರ ಜೊತೆಗೆ ಚರ್ಚೆ ಮಾಡಲು ನವದೆಹಲಿಗೆ ತೆರಳಿದ್ದ ಸಿಎಂ ಯಡಿಯೂರಪ್ಪ ಸದ್ಯದಲ್ಲೇ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇರುವುದಾಗಿ ಮಾಹಿತಿ ನೀಡಿದ್ದಾರೆ.
ಸಂಪುಟ ವಿಸ್ತರಣೆಯನ್ನೊಳಗೊಂಡಂತೆ ರಾಜ್ಯ ರಾಜಕಾರಣದ ಇನ್ನಿತರ ವಿಚಾರಗಳ ಜೊತೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ, ಗೃಹ ಸಚಿವ ಅಮಿತ್ ಶಾ ಮತ್ತು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರೊಂದಿಗೆ ನಿನ್ನೆ ಮಾತುಕತೆ ನಡೆಸಿದ್ದಾರೆ. ಆ ಬಳಿಕ ಮಾತನಾಡಿರುವ ಯಡಿಯೂರಪ್ಪ ರಾಜ್ಯದ ಸಂಪುಟ ವಿಸ್ತರಣೆ ಜೆ. ಪಿ. ನಡ್ಡಾ ಮತ್ತು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ನಡೆಯಲಿರುವುದಾಗಿ ಮಾಹಿತಿ ನೀಡಿದ್ದಾರೆ.
ಈ ವಾರದಲ್ಲಿಯೇ ಸಂಪುಟ ವಿಸ್ತರಣೆ ನಡೆಯುವ ಎಲ್ಲಾ ಸಾಧ್ಯತೆಗಳೂ ಇವೆ. ಜ. 13 ರಂದೇ ಸಂಪುಟ ವಿಸ್ತರಣೆ ಕಾರ್ಯಗಳು ನಡೆಯುವ ಸಾಧ್ಯತೆಗಳು ಹೆಚ್ಚಾಗಿರುವುದಾಗಿಯೂ ಸರ್ಕಾರದ ಮೂಲಗಳು ತಿಳಿಸಿವೆ. ಸಂಪುಟದಲ್ಲಿ 7 ನೂತನ ಸಚಿವರು ಸ್ಥಾನ ಪಡೆಯಲಿದ್ದಾರೆ. ಯಾರಿಗೆಲ್ಲಾ ಈ ಬಾರಿಯ ಸಂಪುಟದಲ್ಲಿ ಅವಕಾಶ ನೀಡಲಾಗದೆ ಎಂದು ಶೀಘ್ರದಲ್ಲೇ ತಿಳಿಸುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.