ಬೆಂಗಳೂರು: ಈ ಬಾರಿಯ ಕನ್ನಡ ಸಾಹಿತ್ಯ ಸಮ್ಮೇಳನ ಹಾವೇರಿಯಲ್ಲಿ ನಡೆಯಲಿರುವುದಾಗಿ ಕನ್ನಡ ಸಾಹಿತ್ಯ ಪರಿಷತ್ ಮಾಹಿತಿ ನೀಡಿದೆ. ಫೆ. 26 ರಿಂದ ಫೆ. 28 ರ ವರೆಗೆ 86 ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿರುವುದಾಗಿ ಪರಿಷತ್ ತಿಳಿಸಿದೆ. ಇದಕ್ಕಾಗಿ ಹಾವೇರಿಯ ಜಿಎಚ್ ಕಾಲೇಜಿನ 28 ಎಕರೆ ಪ್ರದೇಶವನ್ನು ಗುರುತಿಸಲಾಗಿದೆ.
ಕೊರೋನಾ ನಡುವೆಯೂ ಸಮ್ಮೇಳನವನ್ನು ಸಮರ್ಪಕವಾಗಿ ನಡೆಸುವ ನಿಟ್ಟಿನಲ್ಲಿ ಸಮ್ಮೇಳನ ನಡೆಸಲು ಪೂರಕ ಸಿದ್ಧತೆಗಳನ್ನು ನಡೆಸಲಾಗುತ್ತಿದೆ ಎಂದು ಪರಿಷತ್ ಅಧ್ಯಕ್ಷ ಮನು ಬಳಿಗಾರ್ ಮಾಹಿತಿ ನೀಡಿದ್ದಾರೆ. ಸಮ್ಮೇಳನದ ಸಂಬಂಧ ಈಗಾಗಲೇ ಗೃಹಸಚಿವ ಬಸವರಾಜ್ ಬೊಮ್ಮಾಯಿ, ಸಾಹಿತಿಗಳು, ಪರಿಷತ್ ಸದಸ್ಯರ ಜೊತೆಗೂ ಮಾತುಕತೆ ನಡೆಸಲಾಗಿದೆ. ಈ ಸಮ್ಮೇಳನದಲ್ಲಿ ಸುಮಾರು 2 ಲಕ್ಷ ಜನ ಭಾಗವಹಿಸುವ ಸಾಧ್ಯತೆಗಳಿದ್ದು, ಈ ಹಿನ್ನೆಲೆಯಲ್ಲಿ ಕೊರೋನಾ ಮುಂಜಾಗ್ರತಾ ಕ್ರಮಗಳನ್ನು ಸಹ ವಹಿಸಲಾಗಿರುವುದಾಗಿ ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ ಫೆಬ್ರವರಿ ತಿಂಗಳಿನಲ್ಲಿ ಸೋಂಕಿನ ಪ್ರಮಾಣ ಮತ್ತಷ್ಟು ನಿಯಂತ್ರಣಕ್ಕೆ ಬರುವ ಸಾಧ್ಯತೆಗಳಿವೆ. ಕೊರೋನಾ ಕುರಿತಂತೆ ರಾಜ್ಯದ ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಕೇಂದ್ರೀಯ ಆರೋಗ್ಯ ಇಲಾಖೆಯ ಅಧಿಕಾರಿಗಳ ಜೊತೆಗೆ ಮಾಹಿತಿ ಪಡೆದುಕೊಳ್ಳಲಾಗತ್ತದೆ ಎಂದು ಪರಿಷತ್ ಮಾಹಿತಿ ನೀಡಿದೆ. ಸಮ್ಮೇಳನದಲ್ಲಿ ಆಹಾರ, ಆತಿಥ್ಯ ಮತ್ತು ಪುಸ್ತಕ ಮೇಳಗಳನ್ನು ಸಮರ್ಪಕವಾಗಿ ನಡೆಸಲು ಸಮಿತಿಗಳನ್ನು ರಚನೆ ಮಾಡಲಾಗಿದೆ ಎಂದು ಪರಿಷತ್ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.