ಬೆಂಗಳೂರು: ರಾಜ್ಯದಲ್ಲಿ ಹೆಚ್ಚು ಬಂಡವಾಳ ಹೂಡಿಕೆಯಾಗುವಂತೆ ಮಾಡುವ ದೃಷ್ಟಿಯಲ್ಲಿ ಟಾಟಾ ಸಮೂಹ ಸಂಸ್ಥೆಯ ಜೊತೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇ-ಸಭೆಯನ್ನು ನಡೆಸಿದರು.
ಟಾಟಾ ಸನ್ಸ್ ಅಧ್ಯಕ್ಷ ಎನ್. ಚಂದ್ರಶೇಖರ್ ಮತ್ತು ಸಂಸ್ಥೆಯ ಇನ್ನಿತರ ಅಧಿಕಾರಿಗಳ ಜೊತೆಗೆ ಸಿಎಂ ಚರ್ಚಿಸಿದರು. ಖಾಸಗಿ ವಲಯದಿಂದ ರಾಜ್ಯದ ಕೈಗಾರಿಕೋದ್ಯಮಗಳಲ್ಲಿ ಹೆಚ್ಚಿನ ಹೂಡಿಕೆಯನ್ನು ಸೆಳೆಯುವ ನಿಟ್ಟಿನಲ್ಲಿ ಈ ಸಭೆ ಮಹತ್ವ ಪಡೆದಿದೆ.
ರಾಜ್ಯವು ಟಾಟಾ ಸಂಸ್ಥೆಯ ಜೊತೆಗೆ ಬಹುಕಾಲದಿಂದ ಉತ್ತಮ ಬಾಂಧವ್ಯವನ್ನು ಹೊಂದಿದೆ. ಈ ಹಿನ್ನೆಲೆಯಲ್ಲಿ ಈ ಸಂಬಂಧವನ್ನು ಮತ್ತಷ್ಟು ಬಲಿಷ್ಟಗೊಳಿಸುವ ಹಿನ್ನೆಲೆಯಲ್ಲಿಯೂ ಈ ಸಭೆ ಪೂರಕವಾಗಲಿದೆ. ರಾಜ್ಯದಲ್ಲಿ ಟಾಟಾ ಸಂಸ್ಥೆ ಯಾವ ವಲಯದಲ್ಲಿ ಹೂಡಿಕೆ ಮಾಡಲು ಹೆಚ್ಚು ಉತ್ಸುಕವಾಗಿದೆ ಎಂಬುದನ್ನು ಅರ್ಥಮಾಡಿಕೊಳ್ಳುವ ನಿಟ್ಟಿನಲ್ಲಿ ಸರ್ಕಾರ ಪ್ರಯತ್ನ ನಡೆಸುತ್ತಿದೆ ಎಂದು ಕೈಗಾರಿಕಾ ಮತ್ತು ವಾಣಿಜ್ಯ ವಿಭಾಗದ ಹೆಚ್ಚುವರಿ ಕಾರ್ಯದರ್ಶಿ ಗೌರವ್ ಗುಪ್ತಾ ಮಾಹಿತಿ ನೀಡಿದ್ದಾರೆ.
ಸಭೆಯಲ್ಲಿ ಆರ್ ಮತ್ತು ಡಿ ಕೇಂದ್ರಗಳು, ಎಲೆಕ್ಟ್ರಿಕ್ ವಾಹನಗಳು, ಎಲೆಕ್ಟ್ರಾನಿಕ್ಸ್, ಹೊಟೇಲ್ಗಳು, ಮೆಡ್ಟೆಕ್, ಬಯೋಟೆಕ್, ಆರೋಗ್ಯ ವಲಯಕ್ಕೆ ಸಂಬಂಧಿಸಿದಂತೆ ಚರ್ಚೆಗಳು ನಡೆದಿವೆ ಎಂದು ಸರ್ಕಾರದ ಮೂಲಗಳು ಮಾಹಿತಿ ನೀಡಿದ್ದಾರೆ. ಸಭೆಯಲ್ಲಿ ಟಾಟಾ ಸಮೂಹ ಸಂಸ್ಥೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.