ಕಲಬುರ್ಗಿ: ಮಹಿಳೆಯರ ಮೇಲಾಗುವ ದೌರ್ಜನ್ಯ ತಡೆಯುವ ಹಿನ್ನೆಲೆಯಲ್ಲಿ ರಾಜ್ಯದ 29 ಜಿಲ್ಲೆಗಳಲ್ಲಿ ಮಹಿಳಾ ಕಲ್ಯಾಣ ಕೇಂದ್ರಗಳ ಸ್ಥಾಪನೆಗೆ ಸರ್ಕಾರ ಅನುಮೋದನೆ ನೀಡಿದೆ. ಅವುಗಳನ್ನು ಜಿಲ್ಲಾ ಕೇಂದ್ರಗಳಲ್ಲಿ ನಿರ್ಮಾಣ ಮಾಡಲಾಗುವುದು ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.
ಜಮೀನು ಲಭ್ಯವಿರುವ ಜಿಲ್ಲೆಗಳಲ್ಲಿ ಈಗಾಗಲೇ ಮಹಿಳಾ ಕಲ್ಯಾಣ ಕೇಂದ್ರಗಳ ಸ್ಥಾಪನೆಯ ಕಾರ್ಯ ಆರಂಭವಾಗಿದೆ ಎಂದು ಜೊಲ್ಲೆ ಮಾಹಿತಿ ನೀಡಿದ್ದಾರೆ. ಹಾಗೆಯೇ ರಾಜ್ಯದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ನಡೆಯುವುದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆಯೂ ಪೊಲೀಸ್ ಅಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಅಂಗನವಾಡಿ ಮಕ್ಕಳ ಬೆಳವಣಿಗೆಯ ಮೇಲೆ ನಿಗಾ ಇರಿಸುವ ಉದ್ದೇಶದಿಂದ ಅಂಗನವಾಡಿ ಕಾರ್ಯಕರ್ತರಿಗೆ ಸ್ಮಾರ್ಟ್ಫೋನ್ ವಿತರಣೆ ಮಾಡಲಾಗಿದೆ. ಹಾಗೆಯೇ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪೋಷಣಾ ಅಭಿಯಾನವನ್ನು ರಾಜ್ಯದಲ್ಲಿಯೂ ಜಾರಿಗೆ ತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.