ಬೆಂಗಳೂರು: ರಾಜ್ಯ ಸರ್ಕಾರದ ಸಂಪುಟ ವಿಸ್ತರಣೆ ಇಂದು ಸಂಜೆ 3.50 ಕ್ಕೆ ರಾಜಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ 7 ಮಂದಿ ನೂತನ ಸಚಿವರು ಸಿಎಂ ಬಿಎಸ್ವೈ ಸಂಪುಟಕ್ಕೆ ಸೇರ್ಪಡೆಯಾಗಲಿದ್ದು, ರಾಜ್ಯಪಾಲ ವಜೂಭಾಯ್ ವಾಲಾ ಪ್ರಮಾಣವಚನ ಬೋಧಿಸಲಿದ್ದಾರೆ.
ಸಚಿವ ಸಂಪುಟ ವಿಸ್ತರಣೆಯಲ್ಲಿ ಭಾಗವಹಿಸಲು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ದೆಹಲಿಯಿಂದ ಆಗಮಿಸಿದ್ದಾರೆ. ಕಾರ್ಯಕ್ರಮದಲ್ಲಿ ಭಾಗವಹಿಸಲು ಕೇವಲ 100 ಜನರಿಗಷ್ಟೇ ಅವಕಾಶವನ್ನು ನೀಡಲಾಗಿದೆ ಎಂದು ಮೂಲಗಳು ಮಾಹಿತಿ ನೀಡಿವೆ.
ಈ ಸಂಬಂಧ ನೂತನ ಸಚಿವರ ಪಟ್ಟಿಯನ್ನು ಸಹ ಬಿಡುಗಡೆ ಮಾಡಲಾಗಿದ್ದು, ನೂತನ ಸಂಪುಟದಲ್ಲಿ ಎಂ ಟಿ ಬಿ ನಾಗರಾಜ್, ಅರವಿಂದ ಲಿಂಬಾವಳಿ, ಅಂಗಾರ, ಆರ್. ಶಂಕರ್, ಉಮೇಶ್ ಕತ್ತಿ, ಸಿಪಿ ಯೋಗೇಶ್ವರ್, ಮುರುಗೇಶ್ ನಿರಾಣಿ ಅವರಿಗೆ ಸ್ಥಾನ ನೀಡಿ ಸಂಪುಟಕ್ಕೆ ಸೇರಿಸಿಕೊಳ್ಳಲಾಗಿದೆ.
ಈಗಿರುವ ಸಚಿವ ಸಂಪುಟದಿಂದ ಅಬಕಾರಿ ಸಚಿವ ಎಚ್ ನಾಗೇಶ್ ಅವರನ್ನು ಕೈಬಿಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.