ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಸಂಪುಟದ 7 ಮಂದಿ ನೂತನ ಸಚಿವರ ಪ್ರಮಾಣವಚನ ಇಂದು ರಾಜಭವನದಲ್ಲಿ ನಡೆಯಿತು. ರಾಜ್ಯಪಾಲ ವಜೂಭಾಯ್ ವಾಲಾ ಅವರು ನೂತನ ಸಚಿವರಿಗೆ ಪ್ರಮಾಣವಚನ ಬೋಧಿಸಿದರು.
ಲಭ್ಯವಿದ್ದ ಏಳು ಸ್ಥಾನಗಳಿಗೆ ಸಂಬಂಧಿಸಿದಂತೆ ನೂತನ ಸಚಿವರನ್ನು ಆಯ್ಕೆ ಮಾಡಲಾಗಿದೆ. 5 ಮಂದಿ ಮೂಲ ಬಿಜೆಪಿಗರು ಮತ್ತು 2 ಮಂದಿ ವಲಸಿಗರಿಗೆ ಮುಖ್ಯಮಂತ್ರಿ ಸಚಿವ ಸಂಪುಟದಲ್ಲಿ ಸ್ಥಾನ ನೀಡಲಾಗಿದೆ. ನೂತನ ಸಚಿವರಾಗಿ ಉಮೇಶ್ ಕತ್ತಿ, ಅರವಿಂದ ಲಿಂಬಾವಳಿ, ಎಸ್. ಅಂಗಾರ, ಮುರುಗೇಶ್ ನಿರಾಣಿ, ಸಿ. ಪಿ. ಯೋಗೀಶ್ವರ್, ಆರ್. ಶಂಕರ್, ಎಂ. ಟಿ. ಬಿ. ನಾಗರಾಜ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ರಾಜ್ಯದ ಅಬಕಾರಿ ಸಚಿವರಾಗಿದ್ದ ಎಚ್ ನಾಗೇಶ್ ಅವರನ್ನು ಸಂಪುಟದಿಂದ ಕೈಬಿಡಲಾಗಿದ್ದು, ಅವರು ಸರ್ಕಾರಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಇನ್ನೂ ಅನೇಕ ಗಣ್ಯರು ಉಪಸ್ಥಿತರಿದ್ದರು
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.