ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹೆಚ್ಚು ಸಂಖ್ಯೆಯಲ್ಲಿ ವಿಜಯಿಗಳಾಗಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ನ ಗೆಲುವಿನ ಪ್ರಮಾಣ ಕುಸಿದಿದೆ. ಮುಂಬರುವ ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳಲ್ಲಿ ಬಿಜೆಪಿ ಗೆಲುವಿನ ನಾಗಾಲೋಟವನ್ನು ಮುಂದುವರಿಸಲಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಜನಸೇವಕ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗ್ರಾಮ ಪಂಚಾಯತ್ಗಳಲ್ಲಿ ಬಿಜೆಪಿ ಈ ಬಾರಿ ಭರ್ಜರಿ ಪ್ರದರ್ಶನ ತೋರಿದೆ. ಇದು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರದ ಜನಸ್ನೇಹಿ ಯೋಜನೆಗಳು ಮತ್ತು ಸಮಾಜಮುಖಿ ಆಡಳಿತಕ್ಕೆ ಜನತೆ ಬೆಂಬಲ ನೀಡಿರುವುದಕ್ಕೆ ಸಾಕ್ಷಿ ಎಂದು ಅಭಿಪ್ರಾಯ ವ್ಯಕ್ಷಪಡಿಸಿದ್ದಾರೆ.
ಭಾರತೀಯ ಜನತಾ ಪಕ್ಷ ುಳಿದ ಪಕ್ಷಗಳಂತಲ್ಲ. ಬದಲಾಗಿ ಜನ ಸೇವೆಯನ್ನೇ ನೆಚ್ಚಿಕೊಂಡು, ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂಬ ಧ್ಯೇಯದ ಜೊತೆಗೆ ಕಾರ್ಯ ನಿರ್ವಹಿಸುವ ಪಕ್ಷ. ಇದರಿಂದಲೇ ಬಿಜೆಪಿ ಇಂದು ವಿಶ್ವದ ಅತ್ಯಂತ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಮುಂದಿನ ಚುನಾವಣೆಗಳಲ್ಲಿಯೂ ಬಿಜೆಪಿ ಗೆಲುವಿನೊಂದಿಗೆ ಮುಂದುವರಿಯಲಿದೆ, ಪಕ್ಷ ಮತ್ತಷ್ಟು ಬಲಿಷ್ಟವಾಗಲಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಬಿಜೆಪಿ ಇನ್ನೂ ಹಲವು ಗಣ್ಯರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.