ನವದೆಹಲಿ: ದೇಶದೆಲ್ಲೆಡೆ ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಸೂರ್ಯನು ತನ್ನ ಪಥ ಬದಲಿಸುವ ಉತ್ತರಾಯಣದ ಪರ್ವಕಾಲದಲ್ಲಿ ದೇಶದ ಅನೇಕ ಗಣ್ಯರು ಶುಭ ಕೋರಿದ್ದಾರೆ.
ಮಕರ ಸಂಕ್ರಾಂತಿಯ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕನ್ನಡದಲ್ಲಿ ಶುಭಾಶಯಗಳನ್ನು ತಿಳಿಸಿ ಟ್ವೀಟ್ ಮಾಡಿದ್ದಾರೆ. ಕರ್ನಾಟಕದ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು. ಈ ಪವಿತ್ರ ಹಬ್ಬ ಎಲ್ಲರ ಜೀವನದಲ್ಲೂ ಸುಖ, ಸಮೃದ್ಧಿ ಮತ್ತು ಆರೋಗ್ಯವನ್ನು ಕರುಣಿಸಲಿ ಎಂದು ಹಾರೈಸುವ ಮೂಲಕ ಕನ್ನಡಿಗರ ಮೆಚ್ಚುಗೆ ಗಳಿಸಿದ್ದಾರೆ.
ಅಲ್ಲದೆ ಅಸ್ಸಾಮ್ ಜನರಿಗೆ ಮಾಘ್ ಬಿಹು ಹಬ್ಬದ ಶುಭಾಶಯಗಳನ್ನು ಮತ್ತು ತಮಿಳುನಾಡಿನ ಜನರಿಗೆ ಪೊಂಗಲ್ ಶುಭಾಶಯಗಳನ್ನು ತಮಿಳಿನಲ್ಲಿಯೇ ತಿಳಿಸಿದ್ದಾರೆ.
ಕರ್ನಾಟಕದ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು. ಈ ಪವಿತ್ರ ಹಬ್ಬ ಎಲ್ಲರ ಜೀವನದಲ್ಲೂ ಸುಖ, ಸಮೃದ್ಧಿ ಮತ್ತು ಆರೋಗ್ಯವನ್ನು ಕರುಣಿಸಲಿ. pic.twitter.com/50ScDL9H8H
— Amit Shah (@AmitShah) January 14, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.