ಬೆಂಗಳೂರು: ರಾಜ್ಯದ ಪೊಲೀಸ್ ಇಲಾಖೆಗೆ ಹತ್ತು ಸಾವಿರದ ಮೂವತ್ತ ನಾಲ್ಕು ವಸತಿ ಗೃಹಗಳನ್ನು ನಿರ್ಮಾಣ ಮಾಡುವ ನಿಟ್ಟಿನಲ್ಲಿ ಸರ್ಕಾರ ನಿರ್ಧರಿಸಿದೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬುಧವಾರ ನಡೆದ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. 9524 ಪೊಲೀಸ್ ಕಾನ್ಸ್ಟೇಬಲ್ ಮತ್ತು 510 ಸಬ್ ಇನ್ಸ್ಪೆಕ್ಟರ್ ಗಳಿಗೆ ಒಟ್ಟು 10,034 ವಸತಿ ಗೃಹಗಳನ್ನು ನಿರ್ಮಾಣ ಮಾಡುವ ‘ಪೊಲೀಸ್ ಗೃಹ ಯೋಜನೆ 2025’ ಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಸಚಿವ ಮಾಧುಸ್ವಾಮಿ ಮಾಹಿತಿ ನೀಡಿದ್ದಾರೆ.
ಹಾಗೆಯೇ ರಾಜ್ಯದ ಐಟಿಐಗಳ ಆಧುನೀಕರಣ ಕೌಶಲಾಭಿವೃದ್ಧಿ ಮತ್ತು ಉದ್ಯಮಶೀಲತಾ ಇಲಾಖೆಯಡಿ 150 ಐಟಿಐಗಳ ಆಧುನೀಕರಣಕ್ಕೆ ಟಾಟಾ ಟೆಕ್ನಾಲಜಿಸ್ ಸಂಸ್ಥೆಯ ಜೊತೆಗೆ ಈಗಾಗಲೇ ಒಪ್ಪಂದ ಮಾಡಿಕೊಳ್ಳಲಾಗಿದೆ. ಇದರನ್ವಯ ರಾಜ್ಯ ಸರ್ಕಾರ ರಿಪೇರಿಯನ್ನೊಳಗೊಂಡಂತೆ ಮೂಲಸೌಕರ್ಯಗಳ ಅಭಿವೃದ್ಧಿಗೆ 220 ಕೋಟಿ ರೂ. ಗಳನ್ನು ಬಳಕೆ ಮಾಡಲಿರುವುದಾಗಿಯೂ ಅವರು ಮಾಹಿತಿ ನೀಡಿದ್ದಾರೆ. ಇದಕ್ಕೆ ಇನ್ನುಳಿದ 80% ಮೊತ್ತವನ್ನು ಟಾಟಾ ಟೆಕ್ನಾಲಜಿಸ್ ನೀಡಲಿದೆ ಎಂದು ಸಚಿವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.