ಬೆಂಗಳೂರು: ರಾಜ್ಯದ ಬೀಜ ನಿಗಮವನ್ನು ದೇಶದಲ್ಲೇ ಮಾದರಿ ನಿಗಮವನ್ನಾಗಿ ಮಾಡುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ, ರಾಜ್ಯ ಬೀಜ ನಿಗಮದ ಅಧ್ಯಕ್ಷ ಬಿ. ಸಿ. ಪಾಟೀಲ್ ತಿಳಿಸಿದ್ದಾರೆ.
ಅವರು ರಾಜ್ಯ ಬೀಜ ನಿಗಮದ ಅಧ್ಯಕ್ಷರಾಗಿ ಪದಗ್ರಹಣ ಮಾಡಿ ಮಾತನಾಡಿ, ಪ್ರಮಾಣಿತ ಬೀಜಗಳ ಉತ್ಪಾದನೆಗೆ ಪ್ರಾಶಸ್ತ್ಯ ನೀಡಬೇಕೆಂದು ನುಡಿದರು. ಹಾಗೆಯೇ ಕಳಪೆ ಬೀಜ ಮಾರಾಟಗಾರರ ಮೇಲೆ ನಿಗಾ ವಹಿಸುವಂತೆಯೂ ಅಧಿಕಾರಿಗಳಿಗೆ ಸೂಚಿಸಿದರು. ನಿಗಮದ ಅಭಿವೃದ್ಧಿ ಮತ್ತು ರೈತರಿಗೆ ಅನುಕೂಲ ಕಲ್ಪಿಸುವ ಅನೇಕ ಅವಕಾಶಗಳಿದ್ದು, ಇವುಗಳ ಪ್ರಯೋಜನವನ್ನು ಪಡೆದುಕೊಳ್ಳುವಂತೆಯೂ ಅವರು ಮನವಿ ಮಾಡಿದ್ದಾರೆ.
ಇದೇ ಸಂದರ್ಭದಲ್ಲಿ ನಿಗಮದ ಈವರೆಗಿನ ಸಾಧನೆ, ಮುಂದಿನ ಯೋಜನೆ, ಕೈಗೊಂಡ ಕ್ರಮಗಳು, ಬೀಜ ಉತ್ಪಾದನೆಯ ಪ್ರಮಾಣ, ಪ್ರಮಾಣಿತ ಬೀಜಗಳ ಮಾಹಿತಿ, ರೈತರಿಗೆ ಅವುಗಳನ್ನು ತಲುಪಿಸುವ ಬಗೆ ಮೊದಲಾದವುಗಳ ಬಗೆಗೂ ಮಾಹಿತಿ ಪಡೆದುಕೊಂಡರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.