ಬೆಂಗಳೂರು: ನಗರದ ಭಾರತೀಯ ವಾಯುಪಡೆಯ ತರಬೇತಿ ಕಮಾಂಡ್ನ ಕೇಂದ್ರ ಕಚೇರಿಯಲ್ಲಿ ನಡೆದ ಸಶಸ್ತ್ರ ಪಡೆಗಳ ನಿವೃತ್ತ ಸೈನಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭಾಗವಹಿಸಿ ಸೇನಾ ಸ್ಮಾರಕಕ್ಕೆ ಗೌರವ ಸಲ್ಲಿಸಿದರು.
ಭಾರತೀಯ ಸೇನೆ ಅತ್ಯಂತ ಶೌರ್ಯದಿಂದ ದೇಶವನ್ನು ರಕ್ಷಣೆ ಮಾಡುವ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಅವರ ಸೇವೆಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಿದ ಸೈನಿಕರ ಕಲ್ಯಾಣಕ್ಕಾಗಿ ಅವರಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸುವ ಪ್ರಯತ್ನ ಸರ್ಕಾರದಿಂದ ಆಗುತ್ತಿದೆ ಎಂದು ರಾಜನಾಥ್ ಸಿಂಗ್ ತಿಳಿಸಿದರು.
ಭಾರತೀಯ ಸೇನೆಯ ಮೊದಲ ಕಮಾಂಡರ್ ಇನ್ ಚೀಫ್ ಆಗಿದ್ದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ನಿವೃತ್ತಿಯ ದಿನವನ್ನು ಮಾಜಿ ಸೈನಿಕರ ದಿನವೆಂದು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವರು ಪಾಲ್ಗೊಂಡರು. ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರು 1953 ರ ಜನವರಿ 14 ರಂದು ಕರ್ತವ್ಯದಿಂದ ನಿವೃತ್ತಿ ಹೊಂದಿದ್ದರು. ಕರ್ನಾಟಕದ ಕೊಡಗಿನವರಾಗಿದ್ದ ಕಾರ್ಯಪ್ಪ 1947 ರ ಭಾರತ ಮತ್ತು ಪಾಕಿಸ್ಥಾನದ ನಡುವಿನ ಯುದ್ಧದಲ್ಲಿ ಮುಖ್ಯ ಪಾತ್ರ ವಹಿಸಿದ್ದರು. ಎರಡನೇ ಮಹಾಯುದ್ಧದಲ್ಲಿ ಭಾಗವಹಿಸಿದ ಕೀರ್ತಿಯೂ ಕಾರ್ಯಪ್ಪ ಅವರದ್ದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.