ದಾವಣಗೆರೆ: ಹರಿಹರ ತಾಲೂಕಿನ ಹನಗವಾಡಿ ಗ್ರಾಮದಲ್ಲಿರುವ ವೀರಶೈವ ಪಂಚಮಸಾಲಿ ಲಿಂಗಾಯುತ ಗುರು ಪೀಠಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು 10 ಕೋಟಿ ರೂ. ಅನುದಾನವನ್ನು ನೀಡಿದ್ದಾರೆ.
ಹರಿಹರದ ಲಿಂಗಾಯುತ ಪಂಚಮಸಾಲಿ ಜಗದ್ಗುರು ಪೀಠದಲ್ಲಿ ಹರ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ಸ್ವಾವಲಂಬಿ ಸಮಾವೇಶದ ಸಂಕ್ರಾಂತಿ ಸಂಭ್ರಮವನ್ನು ಉದ್ಘಾಟಿಸಿದ ಅವರು ಅನುದಾನ ನೀಡುವ ಘೋಷಣೆಯನ್ನು ಮಾಡಿದ್ದಾರೆ. ಮಠದ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಅನುದಾನ ಒದಗಿಸುವಂತೆ ಮಠದಿಂದ ಮನವಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಅನುದಾನ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಮುಂದಿನ ನಾಲ್ಕೈದು ದಿನಗಳಲ್ಲಿಯೇ ಅನುದಾನದ ಮೊತ್ತ ಮಠಕ್ಕೆ ತಲುಪುವುದಾಗಿಯೂ ಅವರು ತಿಳಿಸಿದ್ದಾರೆ.
ಈ ಅನುದಾನದ ಸದುಪಯೋಗವನ್ನು ಮಾಡಿಕೊಳ್ಳುವಂತೆಯೂ ತಿಳಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ, ತಾನು ಎಂದೆಂದಿಗೂ ಪಂಚಮಸಾಲಿ ಮಠದ ಜೊತೆಗೆ ಇರುವುದಾಗಿ ತಿಳಿಸಿದ್ದಾರೆ. ಹಾಗೆಯೇ ಮಠದ ಅಭಿವೃದ್ಧಿಗೆ ಸಂಪೂರ್ಣ ಸಹಕಾರವನ್ನು ನೀಡುವ ಭರವಸೆಯನ್ನು ಅವರು ಇದೇ ಸಂದರ್ಭದಲ್ಲಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.