ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರದ ನಿರ್ಮಾಣಕ್ಕಾಗಿ ಶುಕ್ರವಾರ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು 5 ಲಕ್ಷ ರೂಪಾಯಿಗಳನ್ನು ನೀಡಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಿಯೋಗವು ರಾಷ್ಟ್ರಪತಿ ಕೋವಿಂದ್ ಅವರನ್ನು ಭೇಟಿ ಮಾಡಿದೆ.
ನಿಯೋಗದಲ್ಲಿ ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್, ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಖಜಾಂಚಿ ಗೋವಿಂದ್ ದೇವ್ ಗಿರಿ ಮತ್ತು ದೇವಾಲಯ ನಿರ್ಮಾಣ ಸಮಿತಿಯ ಮುಖ್ಯಸ್ಥ ನಿಕೇಂದ್ರ ಮಿಶ್ರಾ ಇದ್ದರು.
ಕಳೆದ ವಾರ, ವಿಎಚ್ಪಿ ಪ್ರಧಾನ ಕಾರ್ಯದರ್ಶಿ ಮಿಲಿಂದ್ ಪರಂಡೆ ಅವರು ಅಯೋಧ್ಯೆ ರಾಮ್ ಮಂದಿರ ನಿರ್ಮಾಣಕ್ಕಾಗಿ ಹಣ ಸಂಗ್ರಹಿಸುವ ವಿಎಚ್ಪಿ ಅಭಿಯಾನ ಜನವರಿ 14 ರಿಂದ ಪ್ರಾರಂಭವಾಗಲಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಕೊಡುಗೆಗಳೊಂದಿಗೆ ಪ್ರಾರಂಭವಾಗಲಿದೆ ಎಂದಿದ್ದರು.
ಹಿಂದೂ ಧಾರ್ಮಿಕ ಮತ್ತು ಇತರ ರಾಷ್ಟ್ರೀಯತಾವಾದಿ ಸಂಘಟನೆಗಳು ರಾಮ ಮಂದಿರ ನಿರ್ಮಾಣಕ್ಕೆ ಹಣ ಸಂಗ್ರಹಿಸಲು ಅತಿದೊಡ್ಡ ಯೋಜನೆಯನ್ನು ರೂಪಿಸುತ್ತಿವೆ. ಅಯೋಧ್ಯೆಯ ರಾಮ ಮಂದಿರಕ್ಕೆ ಹಣ ಸಂಗ್ರಹಿಸಲು ರಾಷ್ಟ್ರೀಯ ಸ್ವಯಂಸೇವಕ ಸಂಘ ಐದು ಲಕ್ಷ ಗ್ರಾಮಗಳು ಮತ್ತು ಹತ್ತು ಕೋಟಿ ಕುಟುಂಬಗಳನ್ನು ತಲುಪಲು ನಿರ್ಧರಿಸಿದೆ.
ರಾಮ ಮಂದಿರವನ್ನು ನಿರ್ಮಿಸುವ ಜವಾಬ್ದಾರಿಯನ್ನು ಹೊಂದಿರುವ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಜನವರಿ 14 ರಿಂದ ಫೆಬ್ರವರಿ 27 ರವರೆಗೆ ನಿಧಿಸಂಗ್ರಹವನ್ನು ನಡೆಸುತ್ತಿದೆ. ಈ ಪ್ರಯತ್ನದಲ್ಲಿ ಐದು ಲಕ್ಷಕ್ಕೂ ಹೆಚ್ಚು ಗ್ರಾಮಗಳ 12 ಕೋಟಿ ಹಿಂದೂ ಕುಟುಂಬಗಳ 55 ಕೋಟಿ ಕುಟುಂಬ ಸದಸ್ಯರನ್ನು ಒಳಗೊಳ್ಳಲು ಟ್ರಸ್ಟ್ ಯೋಜಿಸಿದೆ. ಪುರಾತನ ನಗರವಾದ ಅಯೋಧ್ಯೆಯಲ್ಲಿ ಭಗವಾನ್ ರಾಮನ ಭವ್ಯ ದೇವಾಲಯದ ನಿರ್ಮಾಣಕ್ಕೆ ಸುಮಾರು 1,100 ಕೋಟಿ ರೂ. ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ, ಅದರಲ್ಲಿ ಸುಮಾರು 300-400 ಕೋಟಿ ರೂ. ದೇವಾಲಯದ ಮುಖ್ಯ ರಚನೆಯನ್ನು ನಿರ್ಮಿಸಲು ವೆಚ್ಚವಾಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.