ಚಿಕ್ಕಬಳ್ಳಾಪುರ: ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಮಹಾ ಅಭಿಯಾನ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಚೇರಿ ಉದ್ಘಾಟನೆ ನಡೆಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಚಿವ ಡಾ ಕೆ ಸುಧಾಕರ್, ರಾಮ ಮಂದಿರ ನಿರ್ಮಾಣ ಕಾರ್ಯ ಇಡೀ ರಾಷ್ಟ್ರವನ್ನು ಒಗ್ಗೂಡಿಸುವ ಕೆಲಸವಾಗಿದೆ. ಇದರಿಂದ ರಾಜ್ಯದಲ್ಲಿ ರಾಮರಾಜ್ಯ ನಿರ್ಮಾಣವಾಗಲಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಈ ಭೂಮಿ ಇರುವವರೆಗೂ ಶ್ರೀರಾಮ ಪ್ರಸ್ತುತನಾಗಿರುತ್ತಾನೆ. ಆತನ ಆದರ್ಶ ಎಲ್ಲರಿಗೂ ಮಾರ್ಗದರ್ಶನವಾಗಿರುತ್ತದೆ ಎಂದು ಅವರು ತಿಳಿಸಿದರು. ನಿಧಿ ಸಮರ್ಪಣಾ ಅಭಿಯಾನದಲ್ಲಿ ತಾವೂ ಸಹ ಸಕ್ರಿಯರಾಗಿ ಭಾಗವಹಿಸುವುದಾಗಿ ಅವರು ತಿಳಿಸಿದರು.
ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ನಿಧಿ ಸಂಗ್ರಹ ಅಭಿಯಾನ ನಡೆಯುತ್ತಿದ್ದು, ಇದು ಆಂದೋಲನವಾಗಲಿ ಎಂದು ಹಾರೈಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.