ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 17 ರಂದು ದೇಶದ ವಿವಿಧ ಪ್ರದೇಶಗಳನ್ನು ಕೇವಾಡಿಯಾಗೆ ಸಂಪರ್ಕಿಸುವ ಎಂಟು ರೈಲುಗಳಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಲಿದ್ದಾರೆ. ಈ ರೈಲುಗಳು ಗುಜರಾತಿನ ಕೇವಾಡಿಯಾದಲ್ಲಿ ಇರುವ ವಿಶ್ವದ ಅತೀದೊಡ್ಡ ಏಕತಾ ಪ್ರತಿಮೆಗೆ ತಡೆರಹಿತ ಸಂಪರ್ಕವನ್ನು ಕಲ್ಪಿಸುತ್ತವೆ.
ಈ ಸಂದರ್ಭದಲ್ಲಿ ಗುಜರಾತ್ನ ರೈಲ್ವೆ ಕ್ಷೇತ್ರಕ್ಕೆ ಸಂಬಂಧಿಸಿದ ಹಲವಾರು ಯೋಜನೆಗಳನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಮತ್ತು ರೈಲ್ವೆ ಸಚಿವ ಪಿಯೂಷ್ ಗೋಯಲ್ ಉಪಸ್ಥಿತರಿರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಧಾನ ಮಂತ್ರಿ ದಾಭೋಯ್ – ಚಂದೋಡ್ ಗೇಜ್ ಪರಿವರ್ತಿತ ಬ್ರಾಡ್ ಗೇಜ್ ರೈಲ್ವೆ ಮಾರ್ಗ, ಚಂದೋಡ್ – ಕೆವಾಡಿಯಾ ಹೊಸ ಬ್ರಾಡ್ ಗೇಜ್ ರೈಲ್ವೆ ಮಾರ್ಗ, ಹೊಸದಾಗಿ ವಿದ್ಯುದ್ದೀಕರಿಸಿದ ಪ್ರತಾಪನಗರ – ಕೆವಾಡಿಯಾ ವಿಭಾಗ ಮತ್ತು ದಬೋಯ್, ಚಂದೋಡ್ ಮತ್ತು ಕೆವಾಡಿಯಾದ ಹೊಸ ನಿಲ್ದಾಣ ಕಟ್ಟಡಗಳನ್ನು ಉದ್ಘಾಟಿಸಲಿದ್ದಾರೆ.
ಈ ಕಟ್ಟಡಗಳನ್ನು ಸ್ಥಳೀಯ ವೈಶಿಷ್ಟ್ಯಗಳು ಮತ್ತು ಆಧುನಿಕ ಪ್ರಯಾಣಿಕರ ಸೌಲಭ್ಯಗಳನ್ನು ಒಳಗೊಂಡು ಕಲಾತ್ಮಕವಾಗಿ ವಿನ್ಯಾಸಗೊಳಿಸಲಾಗಿದೆ. ಕೆವಾಡಿಯಾ ರೈಲ್ವೆ ನಿಲ್ದಾಣವು ಹಸಿರು ಕಟ್ಟಡ ಪ್ರಮಾಣೀಕರಣವನ್ನು ಹೊಂದಿರುವ ಭಾರತದ ಮೊದಲ ನಿಲ್ದಾಣವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.