ಬೆಂಗಳೂರು: ದೇಶದ ಯೋಧರು ಮತ್ತು ಅವರ ಕುಟುಂಬಗಳಿಗೆ ನೆರವು ನೀಡುವ ಉದ್ದೇಶವನ್ನಿಟ್ಟುಕೊಂಡು ಗಣರಾಜ್ಯೋತ್ಸವದಂದು ಬೆಂಗಳೂರಿನಿಂದ ಕೋಲಾರಕ್ಕೆ ಮಹಿಳೆಯರ ಬೈಕ್ ಜಾಥಾ ವನ್ನು ‘ಶಿ ಫಾರ್ ಸೊಸೈಟಿ’ ಎಂಬ ಸರ್ಕಾರೇತರ ಸಂಸ್ಥೆ ಆಯೋಜನೆ ಮಾಡಿದೆ.
ಈ ಸಂಸ್ಥೆ ಮಹಿಳೆಯರಿಗೆಂದೇ ಇದ್ದು, ಈ ವರೆಗೆ ಇಂತಹ ಅನೇಕ ಕಾರ್ಯಕ್ರಮಗಳನ್ನು ನಡೆಸಿದೆ. ಈ ಬಾರಿಯ ಗಣರಾಜ್ಯೋತ್ಸವಕ್ಕೆ ಕೋಲಾರದ 100 ಸೈನಿಕರ ಕುಟುಂಬಗಳಿಗೆ ಸೌರ ಫಲಕಗಳನ್ನು ವಿತರಿಸುವ ಉದ್ದೇಶದೊಂದಿಗೆ ಮಹಿಳಾ ಬೈಕ್ ಜಾಥಾ ಹಮ್ಮಿಕೊಂಡಿರುವುದಾಗಿ ಸಂಸ್ಥೆ ತಿಳಿಸಿದೆ.
ದೇಶಕ್ಕೆ ಸೈನಿಕರು ನೀಡುತ್ತಿರುವ ಕೊಡುಗೆಗಳನ್ನು ಜನರಿಗೆ ತಿಳಿಸುವ, ಹುತಾತ್ಮ ಯೋಧರಿಗೆ ಗೌರವ ಸಲ್ಲಿಸುವ ಮತ್ತು ಅವರ ಕುಟುಂಬಗಳಿಗೆ ನೆರವಾಗುವ ಉದ್ದೇಶದಿಂದ ಈ ಜಾಥಾ ಆಯೋಜಿಸಲಾಗಿದೆ ಎಂದು ಸಂಸ್ಥೆ ತಿಳಿಸಿದೆ. ಕೋಲಾರದಲ್ಲಿ 500 ಕ್ಕೂ ಹೆಚ್ಚು ಸೈನಿಕರ ಕುಟುಂಬಗಳಿವೆ. ಹಾಗೆಯೇ ನಾಲ್ಕೈದು ತಲೆಮಾರುಗಳಿಂದಲೂ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಕುಟುಂಬಗಳೂ ಇವೆ. ಈ ಕುಟುಂಬಗಳಿಗೆ ಸೌರ ವಿದ್ಯುತ್ ಒದಗಿಸಿಕೊಡಲು ಈ ಜಾಥಾ ಎಂದು ಸಂಸ್ಥೆ ತಿಳಿಸಿದೆ.
ಈ ಬೈಕ್ ಜಾಥಾದಲ್ಲಿ ಭಾಗವಹಿಸಲು ಈಗಾಗಲೇ 100 ಕ್ಕೂ ಅಧಿಕ ಮಹಿಳೆಯರು ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ಸಂಸ್ಥೆ ಮಾಹಿತಿ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.