ಪುಣೆ: ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಆದರ್ ಪೂನವಾಲ್ಲಾ ಅವರು ಇಂದು ಕೊರೋನಾ ಲಸಿಕೆಯನ್ನು ಪಡೆದುಕೊಂಡಿದ್ದಾರೆ. ತಮ್ಮ ಸಂಸ್ಥೆಯ ಕೋವಿಶೀಲ್ಡ್ ಲಸಿಕೆಯ ಬಗ್ಗೆ ಜನರಲ್ಲಿ ವಿಶ್ವಾಸವನ್ನು ತುಂಬುವ ಸಲುವಾಗಿ ಅವರು ಲಸಿಕೆ ಪಡೆದುಕೊಂಡಿದ್ದಾರೆ.
ದೇಶ ಮತ್ತು ಪ್ರಧಾನಿ ನರೇಂದ್ರ ಮೋದಿಯವರು ವಿಶ್ವದ ಅತಿದೊಡ್ಡ ಕೋವಿಡ್ ವ್ಯಾಕ್ಸಿನೇಷನ್ ಅಭಿಯಾನ ಪ್ರಾರಂಭಿಸುವಲ್ಲಿ ಉತ್ತಮ ಯಶಸ್ಸನ್ನು ಕಂಡಿದ್ದಾರೆ ಎಂದು ಪೂನವಾಲ್ಲಾ ಹೇಳಿದ್ದಾರೆ.
ಆಕ್ಸ್ಫರ್ಡ್ ವಿಶ್ವವಿದ್ಯಾಲಯ ಮತ್ತು ಬ್ರಿಟಿಷ್-ಸ್ವೀಡಿಷ್ ಬಹುರಾಷ್ಟ್ರೀಯ ಔಷಧೀಯ ಕಂಪನಿ ಅಸ್ಟ್ರಾಜೆನೆಕಾ ಸಹಯೋಗದೊಂದಿಗೆ ತನ್ನ ಕಂಪನಿಯು ತಯಾರಿಸಿದ ಕೋವಿಶೀಲ್ಡ್ ಲಸಿಕೆಯನ್ನು ಸ್ವತಃ ತೆಗೆದುಕೊಳ್ಳುವ ವಿಡಿಯೋವನ್ನು ಪೂನವಾಲ್ಲಾ ತನ್ನ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
“ವಿಶ್ವದ ಅತಿದೊಡ್ಡ ಕೋವಿಡ್ ವ್ಯಾಕ್ಸಿನೇಷನ್ ಅಭಿಯಾನ ಪ್ರಾರಂಭಿಸುವಲ್ಲಿ ಭಾರತ ಮತ್ತು ನರೇಂದ್ರ ಮೋದಿಯವರಿಗೆ ಉತ್ತಮ ಯಶಸ್ಸನ್ನು ಬಯಸುತ್ತೇನೆ. ಕೋವಿಶೀಲ್ಡ್ ಈ ಐತಿಹಾಸಿಕ ಪ್ರಯತ್ನದ ಭಾಗವಾಗಿದೆ ಮತ್ತು ಅದರ ಸುರಕ್ಷತೆ ಮತ್ತು ಪರಿಣಾಮಕಾರಿತ್ವವನ್ನು ಅನುಮೋದಿಸಲು, ನಾನು ನಮ್ಮ ಆರೋಗ್ಯ ಕಾರ್ಯಕರ್ತರೊಂದಿಗೆ ಸೇರಿ ಲಸಿಕೆಯನ್ನು ತೆಗೆದುಕೊಳ್ಳುತ್ತಿದ್ದೇನೆ “ಎಂದು ಆದರ್ ಪೂನವಾಲ್ಲಾ ಟ್ವಿಟ್ಟರ್ ನಲ್ಲಿ ಬರೆದಿದ್ದಾರೆ.
I wish India & Sri @narendramodi ji great success in launching the world’s largest COVID vaccination roll-out. It brings me great pride that #COVISHIELD is part of this historic effort & to endorse it’s safety & efficacy, I join our health workers in taking the vaccine myself. pic.twitter.com/X7sNxjQBN6
— Adar Poonawalla (@adarpoonawalla) January 16, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.