ಬೆಂಗಳೂರು: ಉತ್ತರ ಕರ್ನಾಟಕಕ್ಕೆ ಸಂಬಂಧಿಸಿದಂತೆ ಕೇಂದ್ರ ರಸ್ತೆ ಸಾರಿಗೆ ಮತ್ತ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರು ಮಹತ್ವದ ಘೋಷಣೆ ಮಾಡಿದ್ದು, ರೂ.21 ಸಾವಿರ ಕೋಟಿ ವೆಚ್ಚದಲ್ಲಿ 847 ಕಿಲೋ ಮೀಟರ್ ಉದ್ದದ ಹೆದ್ದಾರಿ ನಿರ್ಮಾಣದ 13 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಹೇಳಿದ್ದಾರೆ.
323 ಕೋಟಿ ರೂ. ವೆಚ್ಚದಲ್ಲಿ ನಡೆಸಲಾಗುತ್ತಿರುವ ಹುಬ್ಬಳ್ಳಿಯ ರಾಣಿ ಚೆನ್ನಮ್ಮ ವೃತ್ತದ ಎಲಿವೇಟೆಡ್ ಕಾರಿಡಾರ್ ಹಾಗೂ ಕಲಘಟಗಿ ತಾಲ್ಲೂಕು ದಾಸ್ತಿಕೊಪ್ಪ ಗ್ರಾಮದಲ್ಲಿ ಬೇಡ್ತಿ ನಾಲೆಗೆ ಸೇತುವೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, “ಅನುಮೋದನೆ ನೀಡಲಾಗಿರುವ ಎಲ್ಲಾ ಯೋಜನೆಗಳ ಕಾಮಗಾರಿ ಇದೇ ವರ್ಷ ಆರಂಭವಾಗಲಿದೆ” ಎಂದಿದ್ದಾರೆ.
ಈ ಎಲ್ಲಾ ಯೋಜನೆ ಕುರಿತು ಸಂಪೂರ್ಣ ವರದಿ ಸಿದ್ದಪಡಿಸಲಾಗುತ್ತಿದೆ. ಭೂಸ್ವಾಧೀನ, ಪರಿಸರ ಅನುಮತಿ ಕುರಿತಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಹಕಾರದ ನೀಡಲಿದ್ದಾರೆ ಎಂದಿದ್ದಾರೆ.
ಕರ್ನಾಟಕ ಅತ್ಯಂತ ಪ್ರಗತಿಪರ ರಾಜ್ಯವಾಗಿದ್ದು, ಇಲ್ಲಿನ ಅಭಿವೃದ್ಧಿಗೆ ಎಲ್ಲಾ ರೀತಿಯ ನೆರವು ಓದಗಿಸಲಾಗುವುದು. ಉತ್ತರ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ಪೂರಕವಾಗುವ ಹೆದ್ದಾರಿ ಅಭಿವೃದ್ಧಿಗೆ ಒತ್ತು ನೀಡಿದ್ದು, ಮಹಾರಾಷ್ಟ್ರ ಹಾಗು ತೆಲಂಗಾಣ ರಾಜ್ಯಗಳನ್ನು ಸಂಪರ್ಕಿಸುವ ಹಲವು ಕಾಮಗಾರಿಗಳು ರಾಜ್ಯಕ್ಕೆ ಪೂರಕವಾಗಿವೆ ಎಂದು ಗಡ್ಕರಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.