ಬೆಂಗಳೂರು: ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಶನಿವಾರ ಸಂಜೆ ಆಗಮಿಸಿದ ಕೇಂದ್ರ ಗೃಹ ಸಚಿವರು ಮತ್ತು ಭಾರತೀಯ ಜನತಾ ಪಕ್ಷದ ಮಾಜಿ ರಾಷ್ಟ್ರೀಯ ಅಧ್ಯಕ್ಷರೂ ಆದ ಅಮಿತ್ ಶಾ ಅವರನ್ನು ಕಾರ್ಯಕರ್ತರು ಸಂಭ್ರಮೋಲ್ಲಾಸದಿಂದ ಅದ್ದೂರಿಯಾಗಿ ಸ್ವಾಗತಿಸಿದರು.
ಬಿಜೆಪಿ ಬಾವುಟ ಹಿಡಿದಿದ್ದ ಕಾರ್ಯಕರ್ತರು ಭಾರತ್ ಮಾತಾಕಿ ಜೈ, ವಂದೇ ಮಾತರಂ, ಜೈ ಶ್ರೀರಾಮ್, ಬಿಜೆಪಿಗೆ ಜೈ ಎಂದು ಜಯಕಾರದ ಘೋಷಣೆ ಕೂಗುವ ಮೂಲಕ ಸಂಭ್ರಮ ವ್ಯಕ್ತಪಡಿಸಿದರು. ಅಲ್ಲದೆ ಶ್ರೀ ಅಮಿತ್ ಶಾ ಅವರಿಗೆ ಬೃಹತ್ ಹಾರವನ್ನು ಸಮರ್ಪಿಸಲಾಯಿತು.
ರಾಜ್ಯ ಉಸ್ತುವಾರಿಗಳು ಮತ್ತು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಅರುಣ್ ಸಿಂಗ್, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಮುಖ್ಯಮಂತ್ರಿಗಳಾದ ಬಿ. ಎಸ್. ಯಡಿಯೂರಪ್ಪ, ರಾಜ್ಯಾಧ್ಯಕ್ಷರಾದ ನಳಿನ್ಕುಮಾರ್ ಕಟೀಲ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ.ರವಿ, ರಾಜ್ಯದ ಸಚಿವರಾದ ಬಸವರಾಜ ಬೊಮ್ಮಾಯಿ, ಅರವಿಂದ ಲಿಂಬಾವಳಿ, ಭೈರತಿ ಬಸವರಾಜ, ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಮತ್ತು ವಿಧಾನ ಪರಿಷತ್ ಸದಸ್ಯರೂ ಆದ ಎನ್. ರವಿಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ಅಶ್ವತ್ಥನಾರಾಯಣ್, ಶಾಸಕರಾದ ರಘು, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷರಾದ ಮಂಜುನಾಥ್, ಗಣ್ಯರು, ಪದಾಧಿಕಾರಿಗಳು ಇದ್ದರು.
ಬಳಿಕ ವಿಧಾನಸೌಧಕ್ಕೆ ತೆರಳುವ ಮಾರ್ಗದಲ್ಲಿ ಕುಂಬ್ಳೆ ವೃತ್ತದವರೆಗೂ ಕಾರ್ಯಕರ್ತರು ಭಾರತ್ ಮಾತಾಕಿ ಜೈ ಎಂದು ಕೂಗುವ ಮೂಲಕ ಶ್ರೀ ಅಮಿತ್ ಶಾ ಅವರನ್ನು ಸ್ವಾಗತಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.