ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷರಾಗಿ ನೇಮಕವಾಗಿರುವ ಜೋ ಬೈಡನ್ ಅವರು ಜನವರಿ 20 ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿದೆ. ಈಗಾಗಲೇ ಅವರು ತಮ್ಮ ಆಡಳಿತಕ್ಕೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ.
ಜೊ ಬೈಡನ್ ಅವರು ತಮ್ಮ ಹೊಸ ಆಡಳಿತಕ್ಕೆ 20 ಮಂದಿ ಭಾರತೀಯ ಮೂಲದವರನ್ನು ಹೊಸದಾಗಿ ಸೇರ್ಪಡೆಗೊಳಿಸಿದ್ದಾರೆ. ಇದರಲ್ಲಿ 13 ಮಂದಿ ಮಹಿಳೆಯರು. ಎಲ್ಲರನ್ನೂ ಪ್ರಮುಖ ಹುದ್ದೆಗಳಿಗೆ ನೇಮಕ ಮಾಡಲಾಗಿದೆ.
20 ಮಂದಿಯ ಪೈಕಿ 17 ಮಂದಿ ಭಾರತೀಯ ಮೂಲದವರು ಶ್ವೇತ ಭವನದಲ್ಲಿ ಕಾರ್ಯನಿರ್ವಹಿಸಲಿದ್ದಾರೆ ಎಂಬುದು ವಿಶೇಷ.
ವನಿತಾ ಗುಪ್ತ, ಮಾಲಾ ಅಡಿಗ, ನೀರಾ ಟಂಡನ್, ಡಾ.ವಿವೇಕ್ ಮೂರ್ತಿ, ಉಜ್ರಾ ಝೇಯಾ, ಗರಿಮಾ ವರ್ಮಾ ಅಮೆರಿಕದ ಜೋ ಬೈಡನ್ ಆಡಳಿತದಲ್ಲಿ ಪ್ರಮುಖ ಹುದ್ದೆಗಳಿಗೆ ಆಯ್ಕೆಯಾಗಿರುವ ಭಾರತೀಯ ಮೂಲದವರಾಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.