ಬೆಂಗಳೂರು: ಇಂದಿನಿಂದ ತೊಡಗಿದಂತೆ ರಾಜ್ಯದಲ್ಲಿನ ಹೆಚ್ಚಿನ ಆರೋಗ್ಯ ಕೇಂದ್ರಗಳಲ್ಲಿ ಕೊರೋನಾ ಲಸಿಕೆ ಅಭಿಯಾನ ನಡೆಯಲಿದೆ ಎಂದು ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ಕೊರೋನಾ ಲಸಿಕೆ ಅಭಿಯಾನದ ಆರಂಭದ ದಿನವೇ 62% ಜನರಿಗೆ ಲಸಿಕೆ ನೀಡಲಾಗಿದೆ. ಲಸಿಕೆ ಪಡೆದವರೆಲ್ಲರೂ ಈ ವರೆಗೂ ಸುರಕ್ಷಿತರಾಗಿದ್ದಾರೆ. ಯಾರ ಮೇಲೂ ಅಡ್ಡ ಪರಿಣಾಮ ಉಂಟಾಗಿಲ್ಲ. ಆದ್ದರಿಂದ ಈ ಲಸಿಕೆಯ ಮೇಲೆ ಎಲ್ಲರೂ ಸಂಪೂರ್ಣ ನಂಬಿಕೆ ಇರಿಸಬಹುದು ಎಂದು ಸಚಿವರು ತಿಳಿಸಿದ್ದಾರೆ. ಆದರೆ ಕೊರೋನಾ ಲಸಿಕೆ ಪಡೆದ ಮೇಲೆಯೂ ಕೊರೋನಾ ಬರದಂತೆ ತಡೆಯುವ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಅವರು ಕಿವಿಮಾತು ಹೇಳಿದ್ದಾರೆ.
ಕೊರೋನಾ ಲಸಿಕೆಯ ಎರಡನೇ ಹಂತದ ಡೋಸ್ ಪಡೆದ 10 ದಿನಗಳ ಬಳಿಕ ಲಸಿಕೆ ಪಡೆದವರಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗಲು ಆರಂಭವಾಗುತ್ತದೆ. ಮೊದಲ ಡೋಸ್ ಪಡೆದ 28 ದಿನಗಳ ಬಳಿಕ ಎರಡನೇ ಡೋಸ್ ನೀಡಲಾಗುತ್ತದೆ. ಆದ್ದರಿಂದ ಕೊರೋನಾ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವುದು ಕಡ್ಡಾಯ ಎಂದು ಸಚಿವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.