ಬೆಂಗಳೂರು: ಮರಾಠಿ ಭಾಷೆ ಮತ್ತು ಸಂಸ್ಕೃತಿಗಳು ಹೆಚ್ಚಾಗಿರುವ ಕರ್ನಾಟಕ- ಮಹಾರಾಷ್ಟ್ರದ ಗಡಿ ಪ್ರದೇಶಗಳಿಗೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತಮ್ಮ ಉದ್ದಟತನದ ಹೇಳಿಕೆಗಳನ್ನು ನೀಡಿ ಟ್ವೀಟ್ ಮಾಡುವ ಮೂಲಕ ರಾಜ್ಯದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಕನ್ನಡಿಗರನ್ನು ಕೆರಳಿಸಿದ್ದಾರೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಸಿಎಂ ಯಡಿಯೂರಪ್ಪ ಅವರು, ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮರಾಠಿ ಭಾಷೆ ಮತ್ತು ಸಂಸ್ಕೃತಿ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಮಾತನಾಡಿರುವುದು ಅವರ ಉದ್ಧಟತನದ ಪ್ರದರ್ಶನವಾಗಿದೆ. ಇದು ಭಾರತೀಯ ಒಕ್ಕೂಟ ತತ್ವದ ವಿರುದ್ಧವಾದ ನಿಲುವು. ಮಹಾಜನ್ ವರದಿಯೇ ಅಂತಿಮ ಎಂಬುದು ಎಲ್ಲರೂ ಬಲ್ಲ ಸತ್ಯ ಎಂದು ತಿಳಿಸಿದ್ದಾರೆ.
ಪ್ರಾದೇಶಿಕತೆ ಪ್ರದರ್ಶನ ಮತ್ತು ಭಾಷಾಂಧತೆಯ ಮಾತುಗಳು ದೇಶದ ಏಕತೆಗೆ ಮಾರಕವಾಗಿವೆ. ಇದನ್ನು ನಾನು ಖಂಡಿಸುತ್ತೇನೆ. ಕರ್ನಾಟಕದಲ್ಲಿ ಮರಾಠಿಗರು ಕನ್ನಡಿಗರೊಂದಿಗೆ ಬೆರೆತಿದ್ದಾರೆ, ಅದೇ ರೀತಿ ಮಹಾರಾಷ್ಟ್ರದ ಗಡಿ ಜಿಲ್ಲೆಗಳಲ್ಲಿರುವ ಕನ್ನಡಿಗರು ಮರಾಠಿಗರೊಂದಿಗೆ ಬೆರೆತಿದ್ದಾರೆ ಎಂದು ತಮ್ಮ ಉದ್ಧವ್ ವಿರುದ್ಧ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.
ಈ ಸೌಹಾರ್ದಯುತ ವಾತಾವರಣವನ್ನು ಕೆಡಿಸುವ ಪ್ರಯತ್ನ ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಂದ ಆಗುತ್ತಿರುವುದು ನೋವಿನ ಸಂಗತಿ. ಒಬ್ಬ ಭಾರತೀಯನಾಗಿ ಉದ್ಧವ್ ಠಾಕ್ರೆ ಅವರು ಒಕ್ಕೂಟ ತತ್ವವನ್ನು ಗೌರವಿಸುವ ಬದ್ಧತೆಯನ್ನು ತೋರಲಿ ಎಂದು ಠಾಕ್ರೆಗೆ ಬುದ್ಧಿ ಹೇಳುವ ಕೆಲಸವನ್ನು ಬಿಎಸ್ವೈ ಮಾಡಿದ್ದಾರೆ. ಆ ಮೂಲಕ ಮಹಾರಾಷ್ಟ್ರದ ಸಿಎಂ ಅವರಿಗೆ ತಿರುಗೇಟು ನೀಡುವ ಕೆಲಸವನ್ನು ಯಡಿಯೂರಪ್ಪ ಮಾಡಿದ್ದಾರೆ.
'ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮರಾಠಿ ಭಾಷೆ ಮತ್ತು ಸಂಸ್ಕೃತಿ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಮಾತನಾಡಿರುವುದು ಅವರ ಉದ್ಧಟತನದ ಪ್ರದರ್ಶನವಾಗಿದೆ. ಇದು ಭಾರತೀಯ ಒಕ್ಕೂಟ ತತ್ವದ ವಿರುದ್ಧವಾದ ನಿಲುವು. ಮಹಾಜನ್ ವರದಿಯೇ ಅಂತಿಮ ಎಂಬುದು ಎಲ್ಲರೂ ಬಲ್ಲ ಸತ್ಯ. (1/3)
— CM of Karnataka (@CMofKarnataka) January 18, 2021
ಇನ್ನು ಕರ್ನಾಟಕಕ್ಕೆ ಸೇರಿರುವ ಮರಾಠಿ ಸಂಸ್ಕೃತಿಯನ್ನು ಅನುಸರಿಸುವ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಬಗ್ಗೆ ಉದ್ಧವ್ ಅವರ ಮಾತಿಗೆ ಬೆಳಗಾವಿಯ ಕನ್ನಡಿಗರೂ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಕ್ಷಾತೀತವಾಗಿ ಉದ್ಧವ್ ಹೇಳಿಕೆಗೆ ಕರ್ನಾಟಕದಲ್ಲಿ ವಿರೋಧ ವ್ಯಕ್ತವಾಗಿದೆ. ರಾಜಕೀಯ ನಾಯಕರು ಸೇರಿದಂತೆ ಅನೇಕರು ಈ ಹೇಳಿಕೆಯನ್ನು ಖಂಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.