ಬೆಂಗಳೂರು: ಅಸಂಘಟಿತ ವಲಯದ ಸಣ್ಣ ಆಹಾರ ಸಂಸ್ಕರಣಾ ಉದ್ದಿಮೆಗಳಲ್ಲಿ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸುವ ಸಲುವಾಗಿ ರೈತರಿಗೆ ನೀಡುತ್ತಿರುವ ಒಂದು ಜಿಲ್ಲೆ ಒಂದು ಉತ್ಪನ್ನ ತರಬೇತಿ ಕಾರ್ಯಕ್ರಮಕ್ಕೆ ನಾಳೆ ಚಾಲನೆ ದೊರೆಯಲಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿರುವ ಆತ್ಮನಿರ್ಭರ ಅಭಿಯಾನದ ಭಾಗವಾಗಿ ಕೇಂದ್ರ ಸರ್ಕಾರದ ಆಹಾರ ಸಂಸ್ಕರಣಾ ಉದ್ದಿಮೆಗಳ ಮಂತ್ರಾಲಯವು ಪ್ರಧಾನ ಮಂತ್ರಿ ಸಣ್ಣ ಆಹಾರ ಸಂಸ್ಕರಣಾ ಉದ್ದಿಮೆಗಳ ಕ್ರಮಬದ್ಧಗೊಳಿಸುವಿಕೆ ಯೋಜನೆಯನ್ನು ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಅನುಷ್ಟಾನಗೊಳಿಸಲು ಉದ್ದೇಶಿಸಿದ್ದು, ಅಸಂಘಟಿತ ವಲಯಗಳನ್ನು ಸಂಘಟಿತ ವಲಯಕ್ಕೆ ಸೇರಿಸುವುದು, ರೈತ ಉತ್ಪಾದಕ ಸಂಸ್ಥೆಗಳು, ಸ್ವಸಹಾಯ ಸಂಸ್ಥೆಗಳು, ಸ್ವಸಹಾಯ ಸಂಘಗಳು, ಉತ್ಪಾದಕ ಸಹಕಾರಿ ಸಂಘಗಳಿಗೆ ಉತ್ತೇಜನ ನೀಡುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಉತ್ಪನ್ನದ ಮೌಲ್ಯವರ್ಧನೆ, ಸಂಸ್ಕರಣೆ, ಪ್ಯಾಕಿಂಗ್, ಬ್ರ್ಯಾಂಡಿಂಗ್, ಮಾರುಕಟ್ಟೆ ಮೊದಲಾದ ವಿಚಾರಗಳಿಗೆ ಪ್ರೋತ್ಸಾಹ ನೀಡಲಿ ಇದು ರೈತರಿಗೆ ತರಬೇತಿಯನ್ನು ನೀಡಲಾಗುತ್ತದೆ.
ಈ ಯೋಜನೆಯಡಿಯಲ್ಲಿ ಈಗಾಗಲೇ ಮೊದಲ ತರಬೇತಿ ಸಂಪೂರ್ಣವಾಗಿದ್ದು, ಇದರಲ್ಲಿ ಒಟ್ಟು 10 ತರಬೇತಿಗಳು ಮಾರ್ಚ್ ವರೆಗೆ ನಡೆಯಲಿದೆ. ಜ. 18 ರಿಂದ ಎರಡನೇ ತಂಡದ ತರಬೇತಿ ಕಾರ್ಯ ಆರಂಭವಾಗಿದೆ. ಈ ತಂಡಕ್ಕೆ ಸಂಬಾರ ಮತ್ತು ತೋಟಗಾರಿಕಾ ಬೆಳಗಳ ಸಂಸ್ಕರಣೆ ಹಾಗೂ ಮಾರುಕಟ್ಟೆ ಕುರಿತು ತರಬೇತಿಯನ್ನು ನೀಡಲಾಗುತ್ತದೆ. ಪ್ರತಿ ತಾಲೂಕಿನಿಂದ ಇಬ್ಬರು ರೈತರನ್ನು ಈ ತರಬೇತಿಗಾಗಿ ಆಯ್ಕೆ ಮಾಡುವುದು ಮತ್ತು ಒಂದು ಗುಂಪು ರಚಿಸಿ 500 ಜನರಿಗೆ ತರಬೇತಿ ನೀಡುವ ಬಗ್ಗೆ ಚರ್ಚಿಸಲಾಗಿದೆ. ಈ ತರಬೇತಿ 6 ದಿನಗಳ ಕಾಲ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.