ಅಹ್ಮದಾಬಾದ್: ಗುಜರಾತ್ನ ಗಿರ್-ಸೋಮನಾಥ್ ಜಿಲ್ಲೆಯ ಪ್ರಭಾಸ್ ಪಟಾನ್ ಪಟ್ಟಣದಲ್ಲಿರುವ ವಿಶ್ವಪ್ರಸಿದ್ಧ ಸೋಮನಾಥ ದೇವಾಲಯವನ್ನು ನಿರ್ವಹಿಸುವ ಟ್ರಸ್ಟ್ನ ಹೊಸ ಅಧ್ಯಕ್ಷರಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಮವಾರ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದ್ದು, ಈ ಹುದ್ದೆಯನ್ನು ಅಲಂಕರಿಸಿದ ಎರಡನೇ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಶ್ರೀ ಸೋಮನಾಥ ಟ್ರಸ್ಟ್ನ ಟ್ರಸ್ಟಿಗಳಲ್ಲಿ ಒಬ್ಬರಾದ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಭಾಗವಹಿಸಿದ್ದ ಸಭೆಯಲ್ಲಿ ಸರ್ವಾನುಮತದಿಂದ ಉನ್ನತ ಹುದ್ದೆಗೆ ಹೆಸರಿಸಲ್ಪಟ್ಟರು.
ಮುಂದಿನ ದಿನಗಳಲ್ಲಿ ಮಾರ್ಗದರ್ಶನ ನೀಡಲು ಟ್ರಸ್ಟಿಗಳು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಮುಂದಿನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆ.
“ಪ್ರಧಾನ ಮಂತ್ರಿ ಜವಾಬ್ದಾರಿಯನ್ನು ಒಪ್ಪಿಕೊಂಡಿದ್ದಾರೆ ಮತ್ತು ಸೋಮನಾಥ್ ತಂಡದ ಪ್ರಯತ್ನವನ್ನು ಶ್ಲಾಘಿಸಿದ್ದಾರೆ” ಎಂದು ದೆಹಲಿಯಲ್ಲಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಲಾಗಿದೆ.
“ಒಟ್ಟಾಗಿ, ಟ್ರಸ್ಟ್ ಮೂಲಸೌಕರ್ಯ, ವಸತಿ ವ್ಯವಸ್ಥೆ, ಮನರಂಜನಾ ಸೌಲಭ್ಯಗಳನ್ನು ಇನ್ನಷ್ಟು ಸುಧಾರಿಸಲು ಸಾಧ್ಯವಾಗುತ್ತದೆ ಮತ್ತು ನಮ್ಮ ಮಹಾನ್ ಪರಂಪರೆಯೊಂದಿಗೆ ಯಾತ್ರಾರ್ಥಿಗಳ ಬಲವಾದ ಸಂಪರ್ಕವನ್ನು ಸ್ಥಾಪಿಸಲು ಸಹಾಯ ಮಾಡುತ್ತದೆ ಎಂದು ಅವರು ಭರವಸೆ ವ್ಯಕ್ತಪಡಿಸಿದರು.
ಸಭೆಯಲ್ಲಿ ಸೌಲಭ್ಯಗಳು, ನಡೆಯುತ್ತಿರುವ ಚಟುವಟಿಕೆಗಳು ಮತ್ತು ಯೋಜನೆಗಳ ಪರಿಶೀಲನೆ ಸಹ ನಡೆಸಲಾಗಿದೆ ಎಂದು ಅದು ಹೇಳಿದೆ.
प्रधानमंत्री श्री @narendramodi जी को सोमनाथ मंदिर ट्रस्ट के अध्यक्ष बनने पर हृदयपूर्वक बधाई देता हूँ। सोमनाथ तीर्थ क्षेत्र के विकास के प्रति मोदी जी का समर्पण अद्भुत रहा है।
मुझे पूर्ण विश्वास है कि मोदी जी की अध्यक्षता में ट्रस्ट, सोमनाथ मंदिर की गरिमा व भव्यता को और बढ़ाएगा। pic.twitter.com/2uJSqJxyKf
— Amit Shah (@AmitShah) January 18, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.