ನವದೆಹಲಿ: ಭಾರತವು ಜನವರಿ 16 ರಂದು ವಿಶ್ವದ ಅತಿದೊಡ್ಡ ಕೊರೋನಾ ಲಸಿಕಾ ಅಭಿಯಾನವನ್ನು ಪ್ರಾರಂಭಿಸಿದ್ದು, ಇದುವರೆಗೆ 3.81 ಲಕ್ಷ ಮಂದಿ ಲಸಿಕೆಯನ್ನು ಪಡೆದುಕೊಂಡಿದ್ದಾರೆ.
ಭಾರತವು ಕೋವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಎಂಬ ಎರಡು ಲಸಿಕೆಗಳನ್ನು ಜನರಿಗೆ ನೀಡುತ್ತಿದೆ. ಮೊದಲ ಹಂತದಲ್ಲಿ ಸುಮಾರು ಮೂರು ಕೋಟಿ ಜನರು ಡೋಸ್ ಪಡೆಯಲಿದ್ದಾರೆ ಮತ್ತು ಈ ಆದ್ಯತೆಯ ಗುಂಪಿನಲ್ಲಿ ಆರೋಗ್ಯ ಮತ್ತು ಮುಂಚೂಣಿ ಕಾರ್ಯಕರ್ತರು ಸೇರಿದ್ದಾರೆ. ಲಸಿಕೆ ವೆಚ್ಚವನ್ನು ಮೊದಲ ಹಂತದಲ್ಲಿ ಕೇಂದ್ರವೇ ಭರಿಸಲಿದೆ ಎಂದು ಮೋದಿ ಹೇಳಿದ್ದಾರೆ.
ಆರೋಗ್ಯ ಸಚಿವಾಲಯದ ಅಧಿಕಾರಿಗಳು ನೀಡಿದ ಮಾಹಿತಿ ಪ್ರಕಾರ, 7,704 ಸೆಷನ್ಗಳಲ್ಲಿ ಲಸಿಕೆ ನೀಡಲು ಪ್ರಾರಂಭವಾದಾಗಿನಿಂದ 3,81,305 ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ. ವ್ಯಾಕ್ಸಿನೇಷನ್ನ ಮೂರನೇ ದಿನ ಅಂದರೆ ಜನವರಿ 18 ರಂದು, 25 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸಂಜೆ 5 ಗಂಟೆಯವರೆಗೆ 1,48,266 ಫಲಾನುಭವಿಗಳಿಗೆ ಲಸಿಕೆ ನೀಡಲಾಯಿತು.
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಮನೋಹರ್ ಅಗ್ನಾನಿ ಅವರು, ಲಸಿಕೆ ನೀಡಿದ ನಂತರ ದೇಶದಲ್ಲಿ ಮೂರು ದಿನಗಳಲ್ಲಿ 580 ಅಡ್ಡ ಪರಿಣಾಮ ಘಟನೆಗಳು ಈವರೆಗೆ ವರದಿಯಾಗಿವೆ. ಅದರಲ್ಲಿ ಏಳು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಉತ್ತರ ಪ್ರದೇಶ ಮತ್ತು ಕರ್ನಾಟಕದಲ್ಲಿ ವರದಿಯಾದ ಎರಡು ಸಾವುಗಳ ಬಗ್ಗೆ ಸ್ಪಷ್ಟನೆ ನೀಡಿರುವ ಆರೋಗ್ಯ ಸಚಿವಾಲಯ, ಈ ಸಾವು ಮತ್ತು ಲಸಿಕೆಗೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.