ನವದೆಹಲಿ: ಕಳೆದ 10 ವರ್ಷಗಳಲ್ಲಿ ತೀವ್ರ ಉಸಿರಾಟದ ಸೋಂಕಿನಿಂದಾಗಿ ಭಾರತದಲ್ಲಿ 35 ಸಾವಿರ ಮಂದಿ ಮೃತರಾಗಿದ್ದಾರೆ. ವಾಯು ಮಾಲಿನ್ಯದಿಂದಾಗಿ ಈ ಸೋಂಕು ಕಾಣಿಸಿಕೊಳ್ಳುತ್ತಿದೆ ಎಂದು ಸರ್ಕಾರದ ವರದಿ ತಿಳಿಸಿದೆ.
ಈ ಬಗ್ಗೆ ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವ್ಡೇಕರ್ ಮಾಹಿತಿ ನೀಡಿದ್ದು, ಪ್ರತಿವರ್ಷ 2.6 ಕೋಟಿ ಮಂದಿಯಲ್ಲಿ ಉಸಿರಾಟದ ಸೋಂಕು ಕಾಣಿಸಿಕೊಳ್ಳುತ್ತಿದೆ. ಅತಿಯಾದ ವಾಯುಮಾಲಿನ್ಯವೇ ಈ ಸೋಂಕಿಗೆ ಪ್ರಮುಖ ಕಾರಣ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಉಸಿರಾಟದ ಹಾಗೂ ಹೃದಯ ಸಂಬಂಧಿ ತೊಂದರೆಗಳಿಗೆ ವಾಯುಮಾಲಿನ್ಯವೇ ಪ್ರಮುಖ ಕಾರಣವಾಗಿರುತ್ತದೆ ಎಂದಿರುವ ಅವರು, ವಾಯುಮಾಲಿನ್ಯದ ತೊಂದರೆಗಳನ್ನು ಕಡಿಮೆಗೊಳಿಸುವುದಕ್ಕೆ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದಿದ್ದಾರೆ.
ಅಸ್ತಮಾ, ಗಂಟಲೂತ ಮೊದಲಾದ ರೋಗಗಳಿಗೆ ವಾಯುಮಾಲಿನ್ಯವೇ ಪ್ರಮುಖ ಕಾರಣವಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ ವಾಯುಮಾಲಿನ್ಯ ೪ರಷ್ಟು ದುಪ್ಪಟ್ಟುಗೊಂಡಿದ್ದು, ಭಾರತ ಮತ್ತು ಚೀನಾದಲ್ಲಿ ಇದರ ಪ್ರಮಾಣ ಅತಿ ಹೆಚ್ಚಾಗಿದೆ ಎಂದು ವಿಶ್ವಸಂಸ್ಥೆ ವರದಿ ಹೇಳಿತ್ತು.
ಈ ನಿಟ್ಟಿನಲ್ಲಿ ಸರ್ಕಾರ ಗಂಭೀರ ಚಿಂತನೆ ನಡೆಸಬೇಕಾಗಿದೆ ಇಲ್ಲವಾದರೆ ವಾಯುಮಾಲಿನ್ಯ ಈ ದೇಶದ ಜನರನ್ನು ಅತ್ಯಧಿಕ ಸಂಖ್ಯೆಯಲ್ಲಿ ಬಲಿಪಡೆಯುತ್ತದೆ ಎಂಬುದರಲ್ಲಿ ಅನುಮಾನವಿಲ್ಲ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.